ಬಂಟ್ವಾಳ: ಪರಂಬೋಕು ಜಾಗದಲ್ಲಿದ್ದ ಅಕ್ರಮ ಮನೆಗಳ ತೆರವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹೋಬಳಿಯ ನೇತ್ರಾವತಿ ನದಿ ಕಿನಾರೆಯ ಪರಂಬೋಕು ಜಾಗದಲ್ಲಿದ್ದ ಅಕ್ರಮ ಮನೆಗಳನ್ನು ಶನಿವಾರ ತೆರವು ಮಾಡಲಾಯಿತು. ಬಂಟ್ವಾಳ ಪುರಸಭಾ ವ್ಯಾಪ್ತಿಗೊಳಪಟ್ಟ ಕಂದಾಯ ಇಲಾಖೆಯ ಸುಮಾರು 2 ಎಕರೆ ಜಾಗದಲ್ಲಿದ್ದ ಸುಮಾರು 14 ಮನೆಗಳನ್ನು ತೆರವುಗೊಳಿಸಲಾಯ್ತು. ತಹಶೀಲ್ದಾರ್ ರಶ್ಮಿ ನೇತೃತ್ವದ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪುರಸಭಾ ಮುಖ್ಯಾಧಿಕಾರಿ ನೇತೃತ್ವದ ಪುರಸಭಾ ಅಧಿಕಾರಿಗಳ ತಂಡ ಪೊಲೀಸ್ ಬಂದೋಬಸ್ತ್ ನಲ್ಲಿ ತೆರವು ಕಾರ್ಯಾಚರಣೆ ನಡೆಯಿತು. ಮೂರು ಜೆಸಿಬಿ ಮೂಲಕ ಅನಧಿಕೃತ ಕಟ್ಟಡಗಳನ್ನು […]
ಬಂಟ್ವಾಳ: 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 55 ವರ್ಷದ ಮಂಜು ಯಾನೆ ಮಂಜುನಾಥ, ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಈತನನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರದ ಸಾಯಿಬರಕಟ್ಟೆ ಎಂಬಲ್ಲಿ ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ತಿಳಿದ್ದಾರೆ.