ಬಾರ್ಕೂರು ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆ ಯಲ್ಲಿ ಶ್ರೀ ಲಕ್ಷಮೀ ಮೋಟಾರ್ಸ್ ಪ್ರೈ. ಲಿ. ಮತ್ತು ಸುಹಾಸ್ ಆಟೋಮೋಟಿವ್ ಪ್ರೈ. ಲಿ. ಇವರಿಂದ ಕ್ಯಾಂಪಸ್ ಇಂಟರ್ವ್ಯೂ.

ಬಾರ್ಕೂರು: ಬಾರ್ಕೂರು ವಿದ್ಯಾಭಿವರ್ಧಿನಿ ಸಂಘದ ಆಡಳಿತಕ್ಕೊಳಪಟ್ಟ ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗವನ್ನು ಕೊಡಿಸುವ ಬಗ್ಗೆ ಚಿಂತನೆ ನಡೆಸಿ ಪ್ರತಿ ವರ್ಷ ಹಲವು ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ ಮಾಡುತ್ತ ಬರುತ್ತಿದೆ. ಹಾಗೆಯೇ ಜೂ.24 ರಂದು ಸಂಸ್ಥೆಗೆ ಶ್ರೀ ಲಕ್ಷಮೀ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸುಹಾಸ್ ಆಟೋಮೋಟಿವ್ ಪ್ರೈವೇಟ್ ಲಿಮಿಟೆಡ್ ಇವರಿಂದ ಕ್ಯಾಂಪಸ್ ಇಂಟರ್ವ್ಯೂ ನಡೆಯಿತು. ವಿದ್ಯಾರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಿದರು.