ಬಾರ್ಕೂರು: ಇಬ್ಬರು ಮಕ್ಕಳು ಸಹಿತ ಒಂದೇ ಮನೆಯ ಐವರಿಗೆ ಕೊರೊನಾ ಸೋಂಕು ದೃಢ

ಬ್ರಹ್ಮಾವರ: ಬಾರ್ಕೂರಿನ ಒಂದೇ ಮನೆಯ ಇಬ್ಬರು ಮಕ್ಕಳು ಸಹಿತ ಐದು ಮಂದಿಯಲ್ಲಿ ಕೊರೊನಾ ಸೋಂಕು ಕಂಡುಬಂದಿದ್ದು, ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ. ಕೋಡಿಬೆಂಗ್ರೆಯ ಕ್ಯಾನ್ಸರ್ ಪೀಡಿತ ವೃದ್ಧೆಯೊಬ್ಬರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಈ ವೇಳೆ ವೃದ್ಧೆಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ವೃದ್ಧೆ ಆಸ್ಪತ್ರೆಯಿಂದ ಬಿಡುಗಡೆಗೊಂಡ ನೇರವಾಗಿ ಬಾರಕೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ಮನೆಗೆ ಬಂದ ಬಳಿಕ ವೃದ್ಧೆಗೆ ಕೊರೊನಾ ಪಾಸಿಟಿವ್ ಬಂದಿದೆ. ಇದೀಗ ಮನೆಯಲ್ಲಿರುವ ಗಂಡ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು […]