ಸ್ತ್ರೀ-ಪುರುಷರೆಂಬ ತಾರತಮ್ಯವಿಲ್ಲದೆ ಸರ್ವಜನಾಂಗದ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು ಬಸವಣ್ಣ: ಪ್ರಸನ್ನ ಹೆಚ್

ಉಡುಪಿ: ಜಗತ್ತಿನಲ್ಲಿ ಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾದ ಅನುಭವ ಮಂಟಪವನ್ನು ರಚಿಸುವ ಮೂಲಕ ಸರ್ವಜನಾಂಗದ ಶ್ರೇಯೋಭಿವೃದ್ಧಿಗೆ ಸ್ತ್ರೀ-ಪುರುಷರೆಂಬ ತಾರತಮ್ಯವಿಲ್ಲದೆ ಮುಕ್ತ ವಾತಾವರಣವನ್ನು ಕಲ್ಪಿಸಿದ ಬಸವಣ್ಣನವರು ಜಗತ್ತಿನ ಪ್ರಥಮ ಪ್ರಜಾಪ್ರಭುತ್ವಕ್ಕೆ ಮಾದರಿಯಾದವರು ಎಂದು ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದರು. ಅವರು ಭಾನುವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಬಸವ ಜಯಂತಿಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ತಾವು ಈ ಹಿಂದೆ ಬಸವಕಲ್ಯಾಣದಲ್ಲಿ […]

ದೈನಂದಿನ ಬದುಕಿನಲ್ಲಿ ಬಸವಣ್ಣನವರ ವಚನ ಸಂದೇಶಗಳನ್ನು ಎಲ್ಲರೂ ಪಾಲಿಸಬೇಕು : ಜಿಲ್ಲಾಧಿಕಾರಿ

ಉಡುಪಿ: ಸಮಾಜದಲ್ಲಿನ ಅಸಮಾನತೆ ,ಮೂಡನಂಬಿಕೆಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ, ಜನಸಾಮಾನ್ಯರಿಗೂ ಅರ್ಥವಾಗುವಂತೆ, ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ತಮ್ಮ ವಚನಗಳ ಮೂಲಕ ನೀಡಿದ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಲೋಕದ ಡೊಂಕ ನೀವೇಕೆ […]

ಮೇ 3 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಸವ ಜಯಂತಿ

ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಬಸವ ಜಯಂತಿ ಆಚರಣೆಯು ಮೇ 3 ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.