ಬಸವಣ್ಣ ನವರ ಕಾಯಕವೇ ಕೈಲಾಸ ಸಂದೇಶ ಎಲ್ಲರಿಗೂ ಸ್ಪೂರ್ತಿಯಾಬೇಕು: ಡಿಸಿ ಹೆಪ್ಸಿಬಾ  

ಉಡುಪಿ, ಮೇ 7:  ಬಸವಣ್ಣ ನವರ ಕಾಯಕವೇ ಕೈಲಾಸ ಸಂದೇಶ ಎಲ್ಲರಿಗೂ ಸ್ಪೂರ್ತಿಯಾಗಬೇಕು, ಸರಕಾರಿ ಅಧಿಕಾರಿ, ಸಿಬ್ಬಂದಿಗಳೂ ಸಹ ತಮ್ಮ ದಿನನಿತ್ಯದ ಕೆಲಸದಲ್ಲಿ ಬಸವಣ್ಣನವರ ಸಂದೇಶಗಳನ್ನು ಅಳವಡಿಸಿಕೊಂಡು ಸಾರ್ವಜನಿಕರ ಕೆಲಸಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ತಿಳಿಸಿದ್ದಾರೆ. ಅವರು ಮಂಗಳವಾರ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಬಸವ ಜಯಂತಿ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಲ್ಲಿ ಬಸವಣ್ಣನವರ ವಚನಗಳನ್ನು ತಿಳಿಯದವರೇ […]

ಮೇ 7: ಬಸವ ಜಯಂತಿ ಆಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಬಸವ ಜಯಂತಿ ಆಚರಣೆಯು ಮೇ 7 ರಂದು ಬೆಳಗ್ಗೆ 10 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ. ರೂಪೇಶ್ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆ ವಹಿಸಲಿದ್ದಾರೆ.