ಸ್ತ್ರೀ-ಪುರುಷರೆಂಬ ತಾರತಮ್ಯವಿಲ್ಲದೆ ಸರ್ವಜನಾಂಗದ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು ಬಸವಣ್ಣ: ಪ್ರಸನ್ನ ಹೆಚ್
ಉಡುಪಿ: ಜಗತ್ತಿನಲ್ಲಿ ಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾದ ಅನುಭವ ಮಂಟಪವನ್ನು ರಚಿಸುವ ಮೂಲಕ ಸರ್ವಜನಾಂಗದ ಶ್ರೇಯೋಭಿವೃದ್ಧಿಗೆ ಸ್ತ್ರೀ-ಪುರುಷರೆಂಬ ತಾರತಮ್ಯವಿಲ್ಲದೆ ಮುಕ್ತ ವಾತಾವರಣವನ್ನು ಕಲ್ಪಿಸಿದ ಬಸವಣ್ಣನವರು ಜಗತ್ತಿನ ಪ್ರಥಮ ಪ್ರಜಾಪ್ರಭುತ್ವಕ್ಕೆ ಮಾದರಿಯಾದವರು ಎಂದು ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದರು. ಅವರು ಭಾನುವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಬಸವ ಜಯಂತಿಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ತಾವು ಈ ಹಿಂದೆ ಬಸವಕಲ್ಯಾಣದಲ್ಲಿ […]
ಕೂಡಲ ಸಂಗಮ ಕ್ಷೇತ್ರದ ಕಾಮಗಾರಿ ಜನವರಿಯೊಳಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ
ಬೆಂಗಳೂರು: 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಐಕ್ಯ ಸ್ಥಳವಾದ ಕೂಡಲ ಸಂಗಮ ಕ್ಷೇತ್ರದ ಎಲ್ಲಾ ಕಾಮಗಾರಿಗಳನ್ನು 2023ರ ಜನವರಿಯೊಳಗೆ ಪೂರ್ಣಗೊಳಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಸೂಚನೆ ನೀಡಿದ್ದಾರೆ. ಗುರುವಾರ ಇಲ್ಲಿ ನಡೆದ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ 16ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಸವಣ್ಣ ಅಂತರಾಷ್ಟ್ರೀಯ ಕೇಂದ್ರದ ಕಟ್ಟಡ, ಡಿಜಿಟಲ್ ಕೇಂದ್ರ, ವಸ್ತುಪ್ರದರ್ಶನ ಹಾಗೂ ಕೂಡಲ ಸಂಗಮ ವಾಣಿಜ್ಯ ಸಂಕೀರ್ಣ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಈ ಕಾಮಗಾರಿಗಳು ಬಸವಣ್ಣವರ ಬದುಕು, […]
ತೆಂಕನಿಡಿಯೂರು: ಜುಲೈ 13 ರಂದು ಹಡಪದ ಅಪ್ಪಣ್ಣ ಜಯಂತಿ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆಯು ಜುಲೈ 13 ರಂದು ಬೆಳಗ್ಗೆ 10 ಗಂಟೆಗೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. […]
ಮಾಹೆ: ‘ವಚನಗಳನ್ನು ಓದು’- ಪ್ರೊ.ರಾಜೇಂದ್ರ ಚೆನ್ನಿ ಅವರಿಂದ ವಿಶೇಷ ಉಪನ್ಯಾಸ
ಮಣಿಪಾಲ: ಹನ್ನೆರಡನೇ ಶತಮಾನದ ಶರಣ ಚಳವಳಿಯ ‘ನವ ರಾಜಕಾರಣ’ ಕರ್ನಾಟಕದಲ್ಲಿ ಅಪೂರ್ವವಾದ ವಚನ ಸಾಹಿತ್ಯಕ್ಕೆ ನಾಂದಿಯಾಗಿ ‘ನವ ಕಾವ್ಯಮೀಮಾಂಸೆ’ಯ ಹುಟ್ಟಿಗೆ ಕಾರಣವಾಯಿತು ಎಂದು ಖ್ಯಾತ ಸಂಸ್ಕೃತಿ ವಿಮರ್ಶಕ ಪ್ರೊ.ರಾಜೇಂದ್ರ ಚೆನ್ನಿ ಅವರು ನುಡಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ‘ವಚನಗಳನ್ನು ಓದು’ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರೊ.ಚೆನ್ನಿ, ಶರಣ ಚಳವಳಿಯ ಸಂದರ್ಭದಲ್ಲಿ ವಿವಿಧ ವೃತ್ತಿ ಮತ್ತು ಸಾಮಾಜಿಕ ಸ್ತರಗಳಿಗೆ ಸೇರಿದ ಪುರುಷ ಮತ್ತು ಮಹಿಳೆಯರು ಕಾವ್ಯಗಳನ್ನು ರಚಿಸಿ ಆ […]
ಬಸವಣ್ಣರ ಸಂದೇಶ ಜನತೆಗೆ ತಲುಪಿಸಲು ಸಂಕಲ್ಪ, ಬೆಂಬಲ ಅಗತ್ಯ: ಜಿ. ರಾಜಶೇಖರ್
ಉಡುಪಿ: ಬಸವಣ್ಣನವರು ಹನ್ನೆರಡನೇ ಶತಮಾನದಲ್ಲಿ ಪ್ರವಾಹ, ಪ್ರವೃತಿ ಹಾಗೂ ಬಹುಜನರ ಸಂಕಲ್ಪದ ವಿರುದ್ಧ ಈಜಿ ಅಸಮಾನತೆಯ ಪರಿಸ್ಥಿತಿಯನ್ನು ಬದಲಾಯಿಸಲು ಪ್ರಯತ್ನಿಸಿದರು. ಇಂದು ಸಾಣೆಹಳ್ಳಿ ಸ್ವಾಮೀಜಿ ಕಾಲದ ಪ್ರವಾಹದ ವಿರುದ್ಧ ಈಜಲು ಹೊರಟಿದ್ದು, ಆ ಮೂಲಕ ಬಸವಣ್ಣರ ಸಂದೇಶಗಳನ್ನು ಜನರಿಗೆ ಮುಟ್ಟಿಸಲು ಸಂಕಲ್ಪಿಸಿದ್ದಾರೆ. ಅವರಿಗೆ ನಾವೆಲ್ಲ ಬೆಂಬಲ ನೀಡಬೇಕಾಗಿದೆ ಎಂದು ಹಿರಿಯ ಚಿಂತಕ ಜಿ. ರಾಜಶೇಖರ್ ಹೇಳಿದರು. ಚಿತ್ರದುರ್ಗ ಜಿಲ್ಲೆಯ ಸಾಣೆಹಳ್ಳಿಯ ಶ್ರೀತರಳಬಾಳು ಜಗದ್ಗುರು ಶಾಖಾ ಮಠದ ಸಹಮತ ವೇದಿಕೆ ಮತ್ತು ಉಡುಪಿ ಬಸವ ಸಮಿತಿಯ ಸಂಯುಕ್ತ ಆಶ್ರಯದಲ್ಲಿ […]