ರಾಷ್ಟ್ರೀಯ ವಿಪತ್ತು ನಿಧಿಯಿಂದ ಉಡುಪಿ ಜಿಲ್ಲೆಗೆ 10 ಕೋಟಿ ರೂ. ಬಿಡುಗಡೆ: ಸಚಿವ ಬೊಮ್ಮಾಯಿ
ಉಡುಪಿ: ರಾಷ್ಟ್ರೀಯ ವಿಪತ್ತು ನಿಧಿ(ಎನ್ ಡಿಆರ್ ಎಫ್)ಯಿಂದ ಉಡುಪಿ ಜಿಲ್ಲೆಗೆ 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಜಿಲ್ಲೆಯ ಪಡುಬಿದ್ರಿ ಕಡಲ ತೀರದಲ್ಲಿ ಉಂಟಾಗಿರುವ ಕಡಲ್ಕೊರೆತ ಸ್ಥಳವನ್ನು ಪರಿಶೀಲನೆ ನಡೆಸಿದರು. ಪ್ರಧಾನಿ ಜೊತೆ ನಿನ್ನೆ ರಾಜ್ಯದ ನೆರೆ ಪರಿಸ್ಥಿತಿ ಬಗ್ಗೆ ಚರ್ಚಿಸಿದ್ದೇವೆ. ಭೂಕುಸಿತ ತಡೆ, ಶಾಶ್ವತ ಪುನರ್ವಸತಿ ಕುರಿತಂತೆಯೂ ಮಾತುಕತೆ ನಡೆಸಿದ್ದೇವೆ. ಹಾಗೆ ಕಡಲ್ಕೊರೆತ ನಿಯಂತ್ರಣಕ್ಕೆ ಹೆಚ್ಚಿನ ಅನುದಾನಕ್ಕೆ ಬೇಡಿಕೆ […]