ರಾಜ್ಯದಲ್ಲಿ ಮಳೆಯಿಂದ ಪ್ರಾಥಮಿಕವಾಗಿ ಅಂದಾಜು 4 ಸಾವಿರ ಕೋಟಿ ಹಾನಿ: ಪ್ರಧಾನಿ ಮೋದಿಗೆ ವರದಿ ಸಲ್ಲಿಕೆ
ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದಾಗಿ ಪ್ರಾಥಮಿಕ ಹಂತದಲ್ಲಿ 4000 ಸಾವಿರ ಕೋಟಿ ಹಾನಿ ಸಂಭವಿಸಿದೆಂದು ಅಂದಾಜಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜತೆಗಿನ ಮಳೆ ಹಾಗೂ ನೆರೆ ಪೀಡಿತ ಪ್ರದೇಶಗಳಿಗೆ ಸಂಬಂಧಿಸಿದ ವಿಡಿಯೋ ಕಾನ್ಫರೆನ್ಸ್ ಸಭೆ ಬಳಿಕ ಮಾಹಿತಿ ನೀಡಿದರು. ನೆರೆಪೀಡಿತ ಪ್ರದೇಶಗಳ ಬಗ್ಗೆ ಪ್ರಧಾನಿ ಮಾಹಿತಿ ಪಡೆದಿದ್ದಾರೆ. ಅತಿ ಹೆಚ್ಚು ಮಳೆಯಾಗಿರುವ ಬಗ್ಗೆ ಪ್ರಧಾನಿಯ ಗಮನಕ್ಕೆ ತಂದಿದ್ದೇವೆ. ಪಶ್ಚಿಮ ಘಟ್ಟಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಇದರಿಂದ ನದಿಗಳು ಉಕ್ಕಿ […]