ಬಸವರಾಜ್ ಬೊಮಾಯಿ ಅವರನ್ನು ಭೇಟಿ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ

ಬೆಂಗಳೂರು: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಂಗಳವಾರದಂದು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ಜನಪರ ಬಜೆಟ್ ಮಂಡಿಸಿದ ಸರ್ಕಾರಕ್ಕೆ ಮಹಿಳೆಯರ ಪರವಾಗಿ ಅಭಿನಂದನೆ: ನಯನಾ ಗಣೇಶ್

ಉಡುಪಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಮಹಿಳೆಯರ,ರೈತರ,ಎಲ್ಲಾ ವರ್ಗದ ಜನರ ಜನಪರ ಬಜೆಟ್ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ನಯನಾ ಗಣೇಶ್ ಹರ್ಷ ವ್ಯಕ್ತಪಡಿಸಿದ್ದಾರೆ. ರೈತರಿಗೆ ನೀಡುತ್ತಿದ್ದ ಬಡ್ಡಿ ರಹಿತ ಸಾಲ 5 ಲಕ್ಷಕ್ಕೆ ಏರಿಕೆ. ಸಣ್ಣ,ಅತೀ ಸಣ್ಣ ರೈತರಿಗೆ 80 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ಕಿಸಾನ್ ಯೋಜನೆ, ನೇತಾರ ಸಮ್ಮಾನ್ ಯೋಜನೆ 3 ಸಾವಿರದಿಂದ 5 ಸಾವಿರಕ್ಕೆ ಏರಿಕೆ, ನೇಕಾರರು,ಮೀನುಗಾರರಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ, ಕಾರ್ಮಿಕ ಮಹಿಳೆಯರಿಗೆ ಮಾಸಿಕ 500 […]

ನವೀಕರಿಸಬಹುದಾದ ಇಂಧನ ವಲಯದಲ್ಲಿ ಕರಾವಳಿಗೆ ಒಂದೂವರೆ ಲಕ್ಷಕೋಟಿ ರೂಪಾಯಿ ಬಂಡವಾಳ: ಬೊಮ್ಮಾಯಿ

ಕಾರ್ಕಳ: ಪರಶುರಾಮ ಸೃಷ್ಟಿಯ ಮೂಲಕ ಸಾರ್ಥಕತೆ ಇದೆ. ಇಲ್ಲಿ ಭಾಗವಹಿಸಿದ ನಾವು ಭಾಗ್ಯವಂತರು. ಪರಶುರಾಮರ ಪ್ರತಿಮೆ ನಿರ್ಮಾಣದ ಮೂಲಕ ಪುರಾಣಕ್ಕೆ ಹೊಸದೊಂದು ಕುರುಹು ಸಿಕ್ಕಿದ್ದು, ಆಮೂಲಕ ಐತಿಹಾಸಿಕ ದಿನವಾಗಿ ಮೂಡಿಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಸಾಧಿಸುವುದೆ ಸಾಧಕನ ಕೆಲಸ ಎಂದು ಸಚಿವ ಸುನೀಲ್ ಕುಮಾರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಾನು ಉದ್ಘಾಟನೆಗೆ ಬಂದಿಲ್ಲ ಪರಶುರಾಮನ ಭಕ್ತನಾಗಿ ಬಂದಿದ್ದೇನೆ. ನನ್ನ ಮನೆಯ ಆರಾಧ್ಯ ದೇವಿ ಎಲ್ಲಮ್ಮ ದೇವಿಯ ಆರಾಧಕ ನಾನು. […]

ಸರಕಾರ ಶಾಲಾ ಬಿಸಿಯೂಟಕ್ಕೆ ತೊಗರಿಬೇಳೆ ಪೂರೈಸಲೂ ಪರದಾಡುತ್ತಿರುವುದು ವಿಷಾದನೀಯ: ವೆರೋನಿಕಾ ಕರ್ನೆಲಿಯೋ

ಉಡುಪಿ: 40% ಕಮೀಷನ್ ಪಡೆಯುವ ಭರದಲ್ಲಿ ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟಕ್ಕೆ ತೊಗರಿ ಬೇಳೆ ಪೊರೈಸಲು ಮರೆತಿರುವ ರಾಜ್ಯ ಸರಕಾರದ ಧೋರಣೆ ನಿಜಕ್ಕೂ ದುರದೃಷ್ಠಕರವಾಗಿದೆ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋವಿಡ್ ಗೂ ಮೊದಲು ಪ್ರತೀ ತಿಂಗಳು ರಾಜ್ಯ ಮಟ್ಟದಲ್ಲಿ ಟೆಂಡರ್ ಕರೆದು ತೊಗರಿ ಬೇಳೆ ಪೂರೈಸಲಾಗುತ್ತಿತ್ತು. ಕೋವಿಡ್ ಬಳಿಕ ಮೂರು ತಿಂಗಳಿಗೊಮ್ಮೆ ತೊಗರಿಬೇಳೆಯನ್ನು ಒಂದೇ ಬಾರಿಗೆ ಸರಬರಾಜು ಮಾಡಲಾಗುತ್ತಿತ್ತು. ಕಳೆದ ಸಪ್ಟೆಂಬರ್ ಮೊದಲ ವಾರದಲ್ಲಿ ಶಾಲೆಗಳಿಗೆ ತೊಗರಿಬೇಳೆ ಸರಬರಾಜು ಆಗಿತ್ತು. […]

ಕೂಡಲ ಸಂಗಮ ಕ್ಷೇತ್ರದ ಕಾಮಗಾರಿ ಜನವರಿಯೊಳಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು: 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಐಕ್ಯ ಸ್ಥಳವಾದ ಕೂಡಲ ಸಂಗಮ ಕ್ಷೇತ್ರದ ಎಲ್ಲಾ ಕಾಮಗಾರಿಗಳನ್ನು 2023ರ ಜನವರಿಯೊಳಗೆ ಪೂರ್ಣಗೊಳಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಸೂಚನೆ ನೀಡಿದ್ದಾರೆ. ಗುರುವಾರ ಇಲ್ಲಿ ನಡೆದ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ 16ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಸವಣ್ಣ ಅಂತರಾಷ್ಟ್ರೀಯ ಕೇಂದ್ರದ ಕಟ್ಟಡ, ಡಿಜಿಟಲ್ ಕೇಂದ್ರ, ವಸ್ತುಪ್ರದರ್ಶನ ಹಾಗೂ ಕೂಡಲ ಸಂಗಮ ವಾಣಿಜ್ಯ ಸಂಕೀರ್ಣ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಈ ಕಾಮಗಾರಿಗಳು ಬಸವಣ್ಣವರ ಬದುಕು, […]