ಮಳೆಹಾನಿಯಿಂದಾದ ಮೂಲಸೌಕರ್ಯ ದುರಸ್ತಿಗೆ ತಕ್ಷಣವೇ 500 ಕೋಟಿ ರೂ.ಗಳ ಅನುದಾನ ಬಿಡುಗಡೆ: ಬಸವರಾಜ ಬೊಮ್ಮಾಯಿ

ಉಡುಪಿ: ಅತಿವೃಷ್ಟಿ, ಪ್ರವಾಹದಿಂದ ಸಂಭವಿಸಿದ ಹಾನಿಯ ಕುರಿತು ಎಲ್ಲಾ ಜಿಲ್ಲೆಗಳಿಂದ ವರದಿ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳಿಗೆ ಅಂದರೆ ಆರ್.ಡಿ.ಪಿ.ಆರ್/ ಲೋಕೋಪಯೋಗಿ ರಸ್ತೆಗಳು , ವಿದ್ಯುತ್, ಸೇತುವೆ ದುರಸ್ತಿಗಾಗಿ 500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಜತಾದ್ರಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಪರಿಶೀಲನೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಆಗಸ್ಟ್ ತಿಂಗಳಿನಲ್ಲಿ ಪುನಃ ಪರಿಶೀಲನೆ ಮಾಡಿ ಅಗತ್ಯಕ್ಕೆ ಅನುಸಾರವಾಗಿ ಹಣ ಬಿಡುಗಡೆ […]

ಮಂಗಳೂರು: ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಬಸವರಾಜ್ ಬೊಮ್ಮಾಯಿ; ಸಂತ್ರಸ್ತರಿಗೆ ಪರಿಹಾರ ಚೆಕ್‌ ವಿತರಣೆ

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರವಾಸ ನಡೆಸಿ, ವಿವಿಧೆಡೆ ನೆರೆ ಹಾಗೂ ಮಳೆಯಿಂದಾದ ಹಾನಿ ಪರಿಶೀಲಿಸಿ, ಅಧಿಕಾರಿಗಳ ಜತೆಗೆ ಸಭೆ ನಡೆಸಿ ಪರಿಹಾರ ಕಾರ್ಯಗಳ ಕುರಿತು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿ, ಸಂತ್ರಸ್ತರಿಗೆ ಪರಿಹಾರ ಚೆಕ್‌ ವಿತರಿಸಿದರು. ಮಡಿಕೇರಿಯಲ್ಲಿ ಮಳೆಹಾನಿಗೊಳಗಾದ ಪ್ರದೇಶಗಳ ನಿರೀಕ್ಷಣೆ ನಡೆಸಿ ಅಲ್ಲಿಂದ ಸುಳ್ಯಕ್ಕೆ ತೆರಳುವ ಸಂದರ್ಭದಲ್ಲಿ ಕೊಯನಾಡು ಮತ್ತು ದ.ಕ.ಜಿಲ್ಲೆಯ ಸಂಪಾಜೆಗೆ ಭೇಟಿ ನೀಡಿ ಮಳೆ ಹಾಗೂ ಭೂಕಂಪದಿಂದ ಹಾನಿಗೊಂಡು ಬಿರುಕು ಬಿಟ್ಟಮನೆಗಳ ವೀಕ್ಷಣೆ ನಡೆಸಿದರು. ಕೊಯನಾಡು ಗಣಪತಿ […]

ಜುಲೈ 12-13 ರಂದು ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

ಉಡುಪಿ: ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಮೊಮ್ಮಾಯಿ ಜುಲೈ 12 ಮತ್ತು 13 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜು. 12 ರಂದು ರಾತ್ರಿ 8.30 ಕ್ಕೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜು. 13 ರಂದು ಬೆಳಗ್ಗೆ 9 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನಂತರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ತೆರಳುವರು. 2.45 ಗಂಟೆಗೆ ಭಟ್ಕಳದಿಂದ ಹೊರಟು, […]

ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣ: ಆಡಿಯೋ ಟೇಪ್ ತನಿಖೆ: ಬೊಮ್ಮಾಯಿ

ಬೆಂಗಳೂರು : ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣ ಸಂಬಂಧ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಹೊಸ ಆಡಿಯೋ ಟೇಪ್ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಹೊಸ ಆಡಿಯೋ ಟೇಪ್ ಬಗ್ಗೆಯೂ ತನಿಖೆ ನಡೆಸಲಾಗುವುದು. ನಾನು ಆ ಆಡಿಯೋ ಕೇಳಿಲ್ಲ. ಆಡಿಯೋದಲ್ಲಿ ಇಬ್ಬರ ನಡುವೆ ಮಾತುಕತೆ ನಡೆದಿದೆ. ಆ ಇಬ್ಬರು ಯಾರು? ಎಲ್ಲವೂ ತನಿಖೆ ಆಗುತ್ತದೆ. ತಪ್ಪಿತಸ್ಥರು ಯಾರಾಗಿದ್ದರೂ […]