ಮಳೆ ಹಾನಿಗೆ ತಕ್ಷಣ ಪರಿಹಾರ ವಿತರಿಸಿ: ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಚಿವ ಬೊಮ್ಮಾಯಿ ಹೇಳಿಕೆ
ಉಡುಪಿ: ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಸಂತ್ರಸ್ಥರಿಗೆ ಯಾವುದೇ ವಿಳಂಬಕ್ಕೆ ಆಸ್ಪದ ನೀಡದೇ ತಕ್ಷಣವೇ ಪರಿಹಾರ ವಿತರಿಸುವಂತೆ ರಾಜ್ಯ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಗುರುವಾರ, ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಮಳೆ ಹಾನಿ ಹಾಗೂ ಕೋವಿಡ್ ಸ್ಥಿತಿಗತಿ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ತಕ್ಷಣ ಪ್ರಾಥಮಿಕ ಹಂತದ ಪರಿಹಾರ ಬಿಡುಗಡೆಗೊಳಿಸಿ, ಮನೆ ಹಾನಿಯ ವಿವರ ಕುರಿತು ರಾಜೀವ ಗಾಂಧಿ ವಸತಿ […]