ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ನಿರಂಜನ್ ಭಟ್ ಗೆ ನಾಲ್ಕು ವರ್ಷಗಳ ಬಳಿಕ 15 ದಿನಗಳ ಜಾಮೀನು ಮಂಜೂರು
ಉಡುಪಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ 2016ರಲ್ಲಿ ನಡೆದ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ನಂದಳಿಕೆಯ ನಿರಂಜನ್ ಭಟ್(30)ಗೆ ಉಡುಪಿ ನ್ಯಾಯಾಲಯ 15 ದಿನಗಳ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ. ನಿರಂಜನ್ ಭಟ್ ತಂದೆ ಹಾಗೂ ಪ್ರಕರಣದ ಸಾಕ್ಷನಾಶ ಆರೋಪಿ ಶ್ರೀನಿವಾಸ ಭಟ್ ಜೂನ್ 22ರಂದು ಅನಾರೋಗ್ಯದಿಂದ ನಿಧನರಾಗಿದ್ದರು. ನಿರಂಜನ್ ಕಳೆದ ನಾಲ್ಕು ವರ್ಷಗಳಿಂದ ಜಾಮೀನು ಸಿಗದೆ ಜೈಲಿನಲ್ಲಿದ್ದಾನೆ. ಈತ ಶ್ರೀನಿವಾಸ್ ಭಟ್ ಅವರ ಏಕೈಕ ಪುತ್ರನಾಗಿರುವುದರಿಂದ, ಧಾರ್ಮಿಕ ಕಾರ್ಯ ನೆರವೇರಿಸಲು ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. […]