ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ:ದತ್ತಿನಿಧಿ ವಿತರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ
ಕುಂದಾಪುರ : ಹೆತ್ತವರು ಧನ್ಯತಾ ಭಾವವನ್ನು ಕಾಣುವಂತೆ ನಮ್ಮ ಬದುಕನ್ನು ರೂಪಿಸಿಕೊಳ್ಳಬೇಕು. ಪರಿವರ್ತನೆಯ ಪ್ರವರ್ಧಮಾನ ಕಾಲದಲ್ಲಿ ಮನುಷ್ಯ ತನ್ನ ತನವನ್ನು ಕಳೆದುಕೊಳ್ಳುವ ಸ್ಥಿತಿಯತ್ತ ಹೆಚ್ಚು ವಾಲುತ್ತಿದ್ದಾನೆ. ಜೀವನದ ಪ್ರಾರಂಭದಿಂದ ಕೊನೆಯ ಕ್ಷಣದವರೆಗೂ ವಿದ್ಯಾರ್ಥಿಯಾಗಿರುವವರು ಮಾತ್ರ ಸಾಧನೆ ಉತ್ತುಂಗ ತಲುಪುತ್ತಾರೆ. ಜೀವನದಲ್ಲಿ ಏರಿಳಿತಗಳು ಇದ್ದಾಗ ಮಾತ್ರ ಬದುಕು ಸಾರ್ಥಕಗೊಳ್ಳುತ್ತದೆ. ಜೀವನದಲ್ಲಿ ಕಾಣುವ ಪ್ರತಿಯೊಂದು ಏರಿಳಿತಗಳನ್ನು ಸಂಯಮ ಹಾಗೂ ಸಮಚಿತ್ತದಿಂದ ಸ್ವೀಕಾರ ಮಾಡಬೇಕು ಎಂದು ಶ್ರೀ ಕ್ಷೇತ್ರ ಹೊರನಾಡಿನ ಧರ್ಮಕರ್ತರಾದ ಡಾ.ಜಿ.ಭೀಮೇಶ್ವರ ಜೋಷಿ ಹೇಳಿದರು. ಇಲ್ಲಿನ ಬಸ್ರೂರಿನ ಶ್ರೀ ಶಾರದಾ […]