ಜನರ ಬೆಂಬಲವಿಲ್ಲದೇ ರಂಗಚಟುವಟಿಕೆಗಳು ನಡೆಯಲು ಸಾಧ್ಯವಿಲ್ಲ: ಬಾಸುಮಾ ಕೊಡಗು
ಕುಂದಾಪುರ: ಜನರ ಬೆಂಬಲವಿಲ್ಲದೇ ರಂಗಚಟುವಟಿಕೆಗಳು ನಡೆಯಲು ಸಾಧ್ಯವಿಲ್ಲ. ಗ್ರಾಮೀಣ ಭಾಗದಲ್ಲಿಯೂ ಸಾಂಸ್ಕತಿಕ ಚಟುವಟಿಕೆಗೆ ಬೆಂಬಲ ನೀಡುವ ಕೆಲಸ ಮಹತ್ವದ್ದು. ಇದು ಹೀಗೆಯೇ ಮುಂದುವರಿಯಬೇಕಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಬಾಸುಮಾ ಕೊಡಗು ಆಶಿಸಿದರು. ಅವರು ಸೋಮವಾರ ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಹಾಗೂ ಯಸ್ಕೋರ್ಡ್ ಟ್ರಸ್ಟ್ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ರಂಗಸುರಭಿ – 2019 ತ್ರಿದಿನ ನಾಟಕೋತ್ಸವ ಎರಡನೇ ದಿನ ವಿಶೇಷ ರೀತಿಯಲ್ಲಿ ಹಮ್ಮಿಕೊಂಡ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಸುರಭಿ ಉಪಾಧ್ಯಕ್ಷ […]