ಬಂಟ್ವಾಳ: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ
ಬಂಟ್ವಾಳ: ಸುಮಾರು 19 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಮಾಣಿ ಮತ್ತು ಇತರ 51 ಜನವಸತಿಗಳಿಗೆ ಬಹುಗ್ರಾಮ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್ ಈಶ್ವರಪ್ಪರವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಂಸದರು, ಬಿಜೆಪಿ ರಾಜ್ಯಧ್ಯಕ್ಷರಾದ ನಳಿನ್ ಕುಮಾರ್ ಕಟೀಲು, ಜನಪ್ರತಿನಿಧಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.