ಮಂಗಳೂರು: ಖಾಸಗಿ ಬಸ್ಸುಗಳ‌ ಮೇಲೆ ಪುತ್ತೂರು, ವಿಟ್ಲ, ಬಂಟ್ವಾಳದಲ್ಲಿ ಕಲ್ಲು ತೂರಾಟ

ಮಂಗಳೂರು: ಖಾಸಗಿ ಬಸ್ಸುಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಮಂಗಳವಾರ ವಿಟ್ಲ, ಪುತ್ತೂರು, ಬಂಟ್ವಾಳ‌ ಮೊದಲಾದ ಭಾಗದಲ್ಲಿ‌ ನಡೆದಿದೆ. ಪುತ್ತೂರು ಕಡೆಗೆ ತೆರಳುವ ಸೆಲಿನಾ ಹಾಗೂ ಸೇಫ್ ವೇ ಸೇರಿದಂತೆ ಸುಮಾರು 7 ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಘಟನೆಯಲ್ಲಿ ಬಸ್ ಗಳ ಗಾಜು ಸಂಪೂರ್ಣ ಪುಡಿಯಾಗಿದ್ದು, ಕೆಲವು‌ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸೋಮವಾರ ಕೇರಳ ಭಾಗದ ಅಡ್ಯನಡ್ಕದಲ್ಲಿ ಗೋ ಸಾಗಾಟಗಾರರ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಪಿಕಪ್ […]