ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ: ಉಡುಪಿ ಜಿಲ್ಲಾಧಿಕಾರಿ
ಉಡುಪಿ: ಜಿಲ್ಲೆಯಲ್ಲಿ ಮಳೆಗಾಲ ಈಗಾಗಲೇ ಭಾಗಶಃ ಚುರುಕುಗೊಂಡಿರುವುದರಿಂದ ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ ಮತ್ತು ಮೆದುಳು ಜ್ವರ ಹರಡುವ ಸಾಧ್ಯತೆ ಹೆಚ್ಚಾಗಿದ್ದು, ಜನರು ಜಾಗೃತರಾಗಿರಬೇಕು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ 7 ವರ್ಷಗಳಿಂದ ಮಲೇರಿಯಾ ಪ್ರಕರಣಗಳಲ್ಲಿ ತೀವ್ರ ಇಳಿಕೆ ದಾಖಲಾಗಿದ್ದು, 2012 ರಲ್ಲಿ 2000 ಕ್ಕೂ ಮಿಕ್ಕಿ ಇದ್ದ ಮಲೇರಿಯಾ ಪ್ರಕರಣಗಳು 2018 ರ ಡಿಸೆಂಬರ್ ವೇಳೆಗೆ 221 ಪ್ರಕರಣಗಳೊಂದಿಗೆ 10 ಪಟ್ಟು ಇಳಿಕೆ ದಾಖಲಾಗಿರುತ್ತದೆ. 2018 […]