ಬೀಚ್ ಸ್ವಚ್ಛತೆಯ ಮೂಲಕ ಪ್ರವಾಸೋದ್ಯಮ ಅಭಿವೃದ್ದಿ- ಉಡುಪಿ ಡಿಸಿ

ಉಡುಪಿ: ಬೀಚ್‍ಗಳನ್ನು ಸ್ವಚ್ಛವಾಗಿಡುವ ಮೂಲಕ ಪ್ರವಾಸಿಗರನ್ನು ಆಕರ್ಷಿಸಿ, ಪ್ರವಾಸೋದ್ಯಮವನ್ನು ಉತ್ತಮ ರೀತಿಯಲ್ಲಿ ಅಭಿವೃದ್ದಿಪಡಿಸಲು ಸಾದ್ಯ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ. ಅವರು ಶನಿವಾರ, ಕರಾವಳಿ ಕಾವಲು ಪೊಲೀಸ್ ವತಿಯಿಂದ, ಮಲ್ಪೆ ಬೀಚ್‍ನಲ್ಲಿ ನಡೆದ ಅಂತಾರಾಷ್ಟ್ರೀಯ ಬೀಚ್ ಸ್ವಚ್ಚತಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬೀಚ್‍ಗಳು ಸ್ವಚ್ಛವಾಗಿದ್ದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ, ಆ ಮೂಲಕ ಪ್ರವಾಸೋದ್ಯಮ ಅಭಿವೃದ್ದಿಗೊಳ್ಳಲಿದ್ದು, ಸ್ಥಳೀಯರಿಗೆ ಹೆಚ್ಚಿನ ಆರ್ಥಿಕ ಅಭಿವೃದ್ದಿಯೂ ಸಾಧ್ಯ, ಅಲ್ಲದೇ ಸಚ್ಛವಾಗಿರುವ ಕಡೆಯಲ್ಲಿ ಯಾರೂ ಸಹ ತ್ಯಾಜ್ಯ ಎಸೆಯಲು ಇಚ್ಚಿಸುವುದಿಲ್ಲ, ಸಮುದ್ರ […]