ಜಿಲ್ಲೆಯ ಎಲ್ಲಾ ಬೀಚ್‍ಗಳಿಗೂ ಬ್ಲೂ ಫ್ಲಾಗ್ ಮಾನ್ಯತೆ ಪಡೆಯಲು ಪ್ರಯತ್ನ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿನ ಎಲ್ಲಾ ಬೀಚ್‍ಗಳಿಗೂ ಬ್ಲೂ ಫ್ಲಾಗ್ ಮಾನ್ಯತೆ ದೊರೆಯುವ ರೀತಿಯಲ್ಲಿ ಬೀಚ್‍ಗಳನ್ನು ಅಭಿವೃದ್ಧಿ ಪಡಿಸಿ, ಪ್ರವಾಸೋದ್ಯಮವನ್ನು ಜಿಲ್ಲೆಯಲ್ಲಿ ಇನ್ನಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಜಿಲ್ಲೆಯಲ್ಲಿ ಬ್ಲೂ ಫ್ಲಾಗ್ ಪಡೆದಿರುವ ಬೀಚ್‍ಗಳಲ್ಲಿನ ಸೌಲಭ್ಯಗಳನ್ನು ಗುರುತಿಸಿ, ಇತರೆ ಬೀಚ್‍ಗಳಲ್ಲಿ ಸಹ ಆ ಸೌಲಭ್ಯಗಳನ್ನು ಅಳವಡಿಸಿ, […]