ಎಲ್ಲರಿಗಾಗಿ ಉಚಿತ ಆರೋಗ್ಯ ಸೇವೆ ಯೋಜನೆಯಡಿ ನಮ್ಮ ಕ್ಲಿನಿಕ್ ಗಳ ಉದ್ಘಾಟನೆ

ಉಡುಪಿ: ಬುಧವಾರದಂದು ಬೀಡಿನಗುಡ್ಡೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ ಇವರ ಸಹಯೋಗದಲ್ಲಿ ನಮ್ಮ ಕ್ಲಿನಿಕ್ ನ ಉದ್ಘಾಟನೆ ನಡೆಯಿತು. ಸೇವೆಯನ್ನು ಉದ್ಘಾಟಿಸಿ ಮಾತನಾಡಿದ ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್, ನಮ್ಮ ಕ್ಲಿನಿಕ್ ಜನಸ್ನೇಹಿ, ಜನೋಪಯೋಗಿ ಆರೋಗ್ಯ ಸೇವೆ ಒದಗಿಸಬೇಕು. ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಡಜನರನ್ನೊಳಗೊಂಡಂತೆ ಎಲ್ಲರಿಗೂ ಆರೋಗ್ಯ ಸೇವೆಯನ್ನು ಸರಳವಾಗಿ ಪಡೆಯಲು ಅನುಕೂಲವಾಗುವ ಉದ್ದೇಶದಿಂದ ಇದನ್ನು ಪ್ರಾರಂಭಿಸಲಾಗಿದೆ ಎಂದರು. ಜಿಲ್ಲೆಯಲ್ಲಿ […]