ಏರ್ ಮಾರ್ಷಲ್ ಕಡೆಯಿಂದ ತರಬೇತಿಯಲ್ಲಿ ಕ್ಷಮತೆ ತೋರಿದ ವೀರರಿಗೆ ಸಿಕ್ಕಿತು ಬಹುಮಾನ

ಬೆಳಗಾವಿ: ವೀರರಿಗೆ ಏರ್ ಮಾರ್ಷಲ್ ಕಡೆಯಿಂದ ಬಹುಮಾನ ವಿತರಣೆ ,ಬೆಳಗಾವಿ ಏರ್​ಮನ್ ತರಬೇತಿ ಪೂರ್ಣಗೊಂಡ ಅಗ್ನಿವೀರರನ್ನು ಅದ್ಧೂರಿ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು. ಅಗ್ನಿಪಥ್ ಯೋಜನೆಯಡಿ ದೇಶದಲ್ಲೇ ತರಬೇತಿ ಪೂರ್ಣಗೊಳಿಸಿದ ಮೊದಲ ಅಗ್ನವೀರರು ಎಂಬ ಖ್ಯಾತಿಗೆ ಈ ಶಿಬಿರಾರ್ಥಿಗಳು ಪಾತ್ರರಾಗಿದ್ದಾರೆ. ಸಾಂಬ್ರಾದಲ್ಲಿನ ಏರ್​ಮನ್ ತರಬೇತಿ ಶಾಲೆಯಲ್ಲಿ 22 ವಾರಗಳ‌ ಕಾಲ ತರಬೇತಿ ಪಡೆದ 2675 ಅಗ್ನಿವೀರರ ಬೀಳ್ಕೊಡುಗೆ ಕಾರ್ಯಕ್ರಮ ಶನಿವಾರ ಅದ್ಧೂರಿಯಾಗಿ ನೆರವೇರಿತು. ತರಬೇತಿ ಅವಧಿಯಲ್ಲಿ ತಾವು ಪಡೆದ ವಿವಿಧ ಕೌಶಲ್ಯಗಳನ್ನು ಅಗ್ನಿವೀರರು ಪ್ರದರ್ಶಿಸಿ, ತಮ್ಮ ಸಾಮರ್ಥ್ಯ ಸಾಬೀತು ಮಾಡಿದರು. […]