ಚಿಮ್ಮುತ್ತಿದೆ ಗೋಕಾಕ್ ಜಲಪಾತ; ಹರಿದು ಬರುತ್ತಿರುವ ಪ್ರವಾಸಿಗರು

ಬೆಳಗಾವಿ: ಅಮೆರಿಕ ದೇಶದ ಪ್ರಸಿದ್ಧ ನಯಾಗರ ಜಲಪಾತವನ್ನು ಹೋಲುವುದರಿಂದ ಭಾರತದ ನಯಾಗಾರವೆಂದೇ ಕರೆಯಲ್ಪಡುವ ನಯನ ಮನೋಹರ ಗೋಕಾಕ್​ ಫಾಲ್ಸ್ ಕಣ್ತುಂಬಿಕೊಳ್ಳಲು ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪಶ್ಚಿಮ ಘಟ್ಟದಲ್ಲಿ ಅಕ್ಷರಶಃ ವರುಣರಾಯ ಅಬ್ಬರಿಸುತ್ತಿದ್ದಾನೆ. ಜಿಲ್ಲೆಯ ಘಟಪ್ರಭಾ, ಹಿರಣ್ಯಕೇಶಿ ನದಿಗಳಿಗೆ ನೀರಿನ ಒಳಹರಿವು ಹೆಚ್ಚಾಗುತ್ತಿದೆ. ಅಪಾರ ಪ್ರಮಾಣದ ನೀರು ಗೋಕಾಕ್ ಫಾಲ್ಸ್​ನತ್ತ ಹರಿದುಬರುತ್ತಿದೆ. 170 ಅಡಿ ಎತ್ತರದಿಂದ ಧುಮ್ಮಿಕ್ಕಿ ಹರಿಯುತ್ತಿರುವ ಜಲಪಾತ ತನ್ನ ರುದ್ರ ರಮಣೀಯ ದೃಶ್ಯವನ್ನು ಪ್ರದರ್ಶಿಸುತ್ತಿದೆ.ಆಕರ್ಷಕ ದೃಶ್ಯ ಕಂಡು ಜನ ಪುಳಕಗೊಳ್ಳುತ್ತಿದ್ದಾರೆ. ಹಾಸುಗಲ್ಲುಗಳ […]