ಮೂರು ತಿಂಗಳ ಗೃಹಲಕ್ಷ್ಮಿ ಹಣ ಮೇ ತಿಂಗಳಲ್ಲಿ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಬಾಕಿ ಉಳಿದಿರುವ ಮೂರು ತಿಂಗಳ ಜನವರಿ ಫೆಬ್ರವರಿ ಮಾರ್ಚ್ ಗ್ರಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ ಒಂದು ವಾರ ಒಂದು ತಿಂಗಳ ಹಣ ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಶೀಘ್ರವೇ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ : ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣವನ್ನು ಎಲ್ಲ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಇಲ್ಲಿ ಸ್ಪಷ್ಟನೆ ನೀಡಿದ್ದಾರೆ. ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದ ಅವರು, ‘ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ. ಯೋಜನೆಗೆ ಹಣ ಫಲಾನುಭವಿಗಳ ಖಾತೆಗಳಿಗೆ ಜಮಾ […]