ಕಳೆದ ಮೂರು ದಿನಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆ
ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇಲ್ಲಿನ ಸೇತುವೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ಎರಡು ದೇವಾಲಯಗಳಿಗೆ ಜಲ ದಿಗ್ಬಂಧನ ಹಾಕಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮಘಟ್ಟ ಪ್ರದೇಶವಾದ ಖಾನಾಪುರ ತಾಲ್ಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕಾಡಂಚಿನ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಪ್ರಸಿದ್ಧ ಹಬ್ಬಾನಟ್ಟಿ ಮಾರುತಿ ಮಂದಿರ ನೀರಿನಿಂದ ಆವೃತಗೊಂಡಿದೆ ಸತತ ಮಳೆಯಿಂದಾಗಿ ಮಲಪ್ರಭಾ, ಪಾಂಡರಿ ಮತ್ತು ಮಹದಾಯಿ ನದಿಗಳು, ಕಳಸಾ, ಬಂಡೂರಿ, ಕೋಟ್ನಿ, ಮಂಗೇತ್ರಿ, […]