ವಿಧಾನಸಭೆ ಅಧಿವೇಶನ: ಒಳಗೆ ವೀರ ಸಾವರ್ಕರ್ ಭಾವಚಿತ್ರ; ಹೊರಗೆ ಪ್ರತಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಒಳಗೆ ವೀರ್ ಸಾವರ್ಕರ್ ಅವರ ಭಾವಚಿತ್ರವನ್ನು ಹಾಕಿರುವ ಕರ್ನಾಟಕ ಬಿಜೆಪಿ ಸರ್ಕಾರದ ಕ್ರಮವು ವಿಧಾನಸೌಧ ಕಟ್ಟಡದ ಮೆಟ್ಟಿಲುಗಳ ಮೇಲೆ ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಯಿತು. ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವೀರ ಸಾವರ್ಕರ್ ಭಾವಚಿತ್ರವನ್ನು ಅನಾವರಣಗೊಳಿಸಿದರು. ಆದರೆ ವಿರೋಧ ಪಕ್ಷಗಳು ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕರ್ನಾಟಕ ವಿಧಾನಸಭೆಯಲ್ಲಿ ವಿವಾದಾತ್ಮಕ ವ್ಯಕ್ತಿಯನ್ನು ಪ್ರದರ್ಶಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು. ವೀರ ಸಾವರ್ಕರ್ ಬಗ್ಗೆ ಜಾಗೃತಿ ಮೂಡಿಸುವ ರಾಜ್ಯಾದ್ಯಂತ ಅಭಿಯಾನದ ಭಾಗವಾಗಿ ಬಿಜೆಪಿಯು […]

ಸಚಿವ ಉಮೇಶ ಕತ್ತಿ ಹೃದಯಾಘಾತದಿಂದ ನಿಧನ: ಪ್ರಧಾನಿಯಾದಿಯಾಗಿ ಗಣ್ಯರಿಂದ ಸಂತಾಪ

ಬೆಂಗಳೂರು: ಬಿಜೆಪಿ ನಾಯಕ, ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 61 ವರ್ಷದ ಕತ್ತಿ ಅವರನ್ನು ಬೆಂಗಳೂರಿನ ಡಾಲರ್‌ ಕಾಲೋನಿ ನಿವಾಸದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕತ್ತಿಯವರ ಪಾರ್ಥೀವ ಶರೀರವನ್ನು ಹುಕ್ಕೇರಿಯ ವಿಶ್ವರಾಜ್ ಶುಗರ್ಸ್ ಆವರಣದಲ್ಲಿ ಸಾರ್ವಜನಿಕರಿಗೆ ಗೌರವ ಸಲ್ಲಿಸಲು ಅನುಕೂಲವಾಗುವಂತೆ ಇಡಲಾಗುವುದು. ಹುಕ್ಕೇರಿಯ ಬೆಲ್ಲದಬಾಗೇವಾಡಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ. ಸಚಿವರ ನಿಧನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಬೆಳಗಾವಿಯ ಹುಕ್ಕೇರಿ […]

ಭಾರತೀಯ ಸೇನೆಯಲ್ಲಿ ಮಹಿಳೆಯರ ನೇಮಕಾತಿ ರ್ಯಾಲಿ

ಉಡುಪಿ, ಮೇ 14: ಭಾರತೀಯ ಸೇನೆ Soldier-GD (ಮಹಿಳಾ ಮಿಲಿಟರಿ ಪೊಲೀಸ್) ಹುದ್ದೆಗಳನ್ನು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಜುಲೈ – ಸೆಪ್ಟೆಂಬರ್ ಅವಧಿಯಲ್ಲಿ ಬೆಳಗಾವಿ ನಗರದಲ್ಲಿ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ. ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಇಚ್ಚಿಸುವ ಮಹಿಳಾ ಅಭ್ಯರ್ಥಿಗಳು ಆನ್‍ಲೈನ್ ಪೋರ್ಟಲ್ www.joinindianarmy.nic.in ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಆನ್‍ಲೈನ್ ನೊಂದಣಿಗೆ ಜೂನ್ 8 ಕೊನೆಯ ದಿನವಾಗಿರುತ್ತದೆ. ನೇಮಕಾತಿ ರ್ಯಾಲಿಯ ನಿಖರ ದಿನಾಂಕ ಮತ್ತು admit card ಅನ್ನು ಅಭ್ಯರ್ಥಿಗಳ ನೊಂದಾಯಿತ ಇ-ಮೇಲ್‍ಗೆ ಕಳುಹಿಸಲಾಗುವುದು ಎಂದು ಜಿಲ್ಲಾ […]