ಬೆಳೆ ವಿಮೆ ಕ್ಲೇಮುಗಳ ತ್ವರಿತ ವಿಲೇವಾರಿ: ಡಿಸಿ ಸೂಚನೆ

ಉಡುಪಿ, ಮೇ 18: ಉಡುಪಿ ಜಿಲ್ಲೆಯಲ್ಲಿ ಕೃಷಿ ಬೆಳೆ ನಷ್ಟಗೊಂಡು ವಿಮಾ ಪರಿಹಾರ ಕ್ಲೇಮು ಮಾಡಿರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಿ ಪರಿಹಾರ ಪಾವತಿಸಲು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಗ್ರ ಕೃಷಿ ಅಭಿಯಾನ 2019-20 ಹಾಗೂ ಫಸಲ್ ಬಿಮಾ ಯೋಜನೆ – ಮುಂಗಾರು ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ರೈತರು ಬೆಳೆ ನಷ್ಟದಿಂದ ವಿಮಾ ಪರಿಹಾರ ಕೋರಿ ಸಲ್ಲಿಸಿರುವ ಕ್ಲೇಮುಗಳಿಗೆ ವಿಮಾ ಕಂಪೆನಿಯು ಆಕ್ಷೇಪಣೆ ಹಾಕಿರುವುದು […]