ಬೆಳ್ಳಾರೆ ಉದ್ವಿಗ್ನ: ನಳಿನ್ ಕುಮಾರ್ ಕಟೀಲ್ ಕಾರಿಗೆ ಮುತ್ತಿಗೆ; ಸಾರ್ವಜನಿಕರಿಂದ ಕಲ್ಲು ತೂರಾಟ, ಪೊಲೀಸರಿಂದ ಲಾಠಿ ಚಾರ್ಜ್

ಸುಳ್ಯ: ನಿನ್ನೆ ತಡರಾತ್ರಿ ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರೆ ಅವರ ಬರ್ಬರ ಹತ್ಯೆ ನಡೆದಿದ್ದು ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಶಿಕ್ಷಿಸುವ ಭರವಸೆ ನೀಡಿದ್ದರೂ ಸಾರ್ವಜನಿಕರ ಆಕ್ರೋಶ ಮಾತ್ರ ತಣ್ಣಗಾಗಿಲ್ಲ. ಘಟನೆಯ ಬಳಿಕ ಸುದ್ದಿ ತಿಳಿದ ಸಂಸದ, ಸಚಿವರು, ಶಾಸಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ಸಂದರ್ಭ ಜನತೆಯ ಮಡುಗಟ್ಟಿದ ಆಕ್ರೋಶ ಕಾರಿಗೆ ಮುತ್ತಿಗೆ ಹಾಕುವ ರೂಪದಲ್ಲಿ ವ್ಯಕ್ತವಾಗಿದೆ. ಸಂಸದ ನಳಿನ್ ಕುಮಾರ್, ಸಚಿವ ಸುನಿಲ್ ಕುಮಾರ್ ಮತ್ತು ಸ್ಥಳೀಯ ಶಾಸಕರ ಕಾರಿಗೆ ಮುತ್ತಿಗೆ […]