ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಗೆ ಹಲ್ಲೆ, ಕೊಲೆ ಬೆದರಿಕೆ: ಪ್ರಕರಣ ದಾಖಲು
ಬೆಳ್ತಂಗಡಿ: ವೇಣೂರು ಠಾಣಾ ವ್ಯಕ್ತಿಯಲ್ಲಿ ಕಾಲೇಜಿಗೆ ಹೋಗಿ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಯನ್ನು ರಸ್ತೆಯ ನಿರ್ಜನ ಪ್ರದೇಶದಲ್ಲಿ ತಡೆದು ಹಲ್ಲೆ ನಡೆಸಿ, ಬಟ್ಟೆಹರಿದು ಮಾನಹಾನಿ ಮಾಡಿ, ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ನಿವಾಸಿ ಶಂಕರ ದೇವಾಡಿಗ ಎಂಬಾತ ವಿದ್ಯಾರ್ಥಿನಿಗೆ ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಶಂಕರ ದೇವಾಡಿಗ ವಿದ್ಯಾರ್ಥಿನಿಯೊಂದಿಗೆ ಕೆಲದಿನಗಳಿಂದ ಅನ್ಯೋನ್ಯವಾಗಿದ್ದ ಎನ್ನಲಾಗಿದು, ಈ ವಿಚಾರ ಆಕೆಯ ತಾಯಿಗೆ ತಿಳಿದು ಆತನೊಂದಿಗೆ ಮಾತನಾಡದಂತೆ ಮಗಳಿಗೆ ಎಚ್ಚರಿಕೆ ನೀಡಿದ್ದರು. […]