ಪತ್ರಕರ್ತರು ಗ್ರಾಮವಾಸ್ತವ್ಯ ಮಾಡಿದ ಕುತ್ಲೂರು ಶಾಲೆಯಲ್ಲಿ ಅಭಿವೃದ್ಧಿ ಪರ್ವ, ಜಿಲ್ಲೆಗೆ ೬೫ ಕೋಟಿ ಪರಿಹಾರ ನೀಡಲು ಸರಕಾರಕ್ಕೆ ಪ್ರಸ್ತಾವಣೆ: ಡಾ| ಆರ್. ಸೆಲ್ವಮಣಿ
ಬೆಳ್ತಂಗಡಿ: ಪತ್ರಕರ್ತರ ಗ್ರಾಮವಾಸ್ತವ್ಯದ ಬಳಿಕ ಕುಗ್ರಾಮ ಕುತ್ಲೂರಿಗೆ ಪರಿವರ್ತನೆಯ ಅವಕಾಶ ಲಭಿಸಿದೆ. ಅಧಿಕಾರಿಗಳು ಹಾಗೂ ಸಂಸ್ಥೆಗಳ ಸಹಕಾರದಲ್ಲಿ ಕುತ್ಲೂರು ಸರಕಾರಿ ಶಾಲೆಯ ಹಲವು ಬೇಡಿಕೆಗಳನ್ನು ಈಡೇರಿಸಿರುವ ಪತ್ರಕರ್ತರು ಉಳಿದ ಬೇಡಿಕೆಗಳನ್ನು ಈಡೇರಿಸುವ ವಿಶ್ವಾಸವಿದೆ ಎಂದು ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಆರ್. ಹೇಳಿದರು. ಕುತ್ಲೂರು ಸ.ಹಿ.ಪ್ರಾ. ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು ಹಾಗೂ ಕುತ್ಲೂರು ಸ.ಹಿ.ಪ್ರಾ. ಶಾಲೆ ಶಾಲಾಭಿವೃದ್ಧಿ ಸಮಿತಿ […]