ಬೆಳ್ತಂಗಡಿ: ಲಾರಿ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ.

ಬೆಳ್ತಂಗಡಿ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಎಂಬಲ್ಲಿ ಜು.19ರಂದು ಬೆಳಗ್ಗೆ ಸಂಭವಿಸಿದೆ. ಮೃತರನ್ನು ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂದು ಗುರುತಿಸಲಾಗಿದೆ. ಗಾಯಗೊಂಡವರ ಮಾಹಿತಿ ಲಭ್ಯವಾಗಿಲ್ಲ. ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಲಾರಿಯಲ್ಲಿ ಶಾಮಿಯಾನದ ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ.ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.