ಬೆಳ್ತಂಗಡಿ: ಎ.17ರಂದು ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಎ.17ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಶಾಸಕ ಕೆ. ವಸಂತ ಬಂಗೇರ ಮತ್ತು ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೆ. ಶೈಲೇಶ್ ಕುಮಾರ್ ಹೇಳಿದರು. ಎ.12ರಂದು ಶ್ರೀ ಗುರುನಾರಾಯಣ ಸಂಕೀರ್ಣದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾಮಪತ್ರ ಸಲ್ಲಿಸುವ ದಿನ ಬೆಳಿಗ್ಗೆ ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಕಾರ್ಯಕರ್ತರ ಬೃಹತ್ ಸಭೆ ನಡೆಯಲಿದೆ. ಖ್ಯಾತ ವಾಗ್ಮಿ ನಿಕೇತ್ ರಾಜ್ , […]