ವೃದ್ದೆ ತಾಯಿಗೆ ಮಗ ಮೊಮ್ಮಗನಿಂದ ಹಲ್ಲೆ: ಬೆಳ್ತಂಗಡಿಯಲ್ಲೊಂದು ಅಮಾನುಷ ಘಟನೆ
ಬೆಳ್ತಂಗಡಿ: ವೃದ್ಧೆ ತಾಯಿಗೆ ಮಗ ಹಾಗೂ ಮೊಮ್ಮಗ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಅಮಾನುಷ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸವಣಾಲು ಎಂಬಲ್ಲಿ ನಡೆದಿದೆ. ಸವಣಾಲು ಹಲಸಿನಕಟ್ಟೆ ಎಂಬಲ್ಲಿನ ನಿವಾಸಿ ವೃದ್ಧೆ ಅಪ್ಪಿ ಶೆಟ್ಟಿ ಎಂಬರಿಗೆ ಅವರ ಮಗ ಶ್ರೀನಿವಾಸ ಶೆಟ್ಟಿ ಹಾಗೂ ಮೊಮ್ಮಗ ಪ್ರದೀಪ್ ಶೆಟ್ಟಿ ಕಂಠಪೂರ್ತಿ ಕುಡಿದು ಮಲಗಿದಲ್ಲೇ ಇರುವ ಅಪ್ಪಿ ಶೆಟ್ಟಿಯವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಎತ್ತಿ ಬಿಸಾಡಿದ್ದಾರೆ. ಈ ದೃಶ್ಯವನ್ನು ಅಲ್ಲೇ ಇದ್ದ ಇನ್ನೋರ್ವ ಮೊಮ್ಮಗ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ. ಅನಾರೋಗ್ಯದಿಂದ […]