ಬೆಳ್ತಂಗಡಿ: 38ರಿಂದ 347ಕ್ಕೆ ಏರಿತು ಕನ್ನಡ ಶಾಲಾ ಮಕ್ಕಳ ಸಂಖ್ಯೆ: ಆಂಗ್ಲ ಮಾಧ್ಯಮದಿಂದ ಕನ್ನಡ ಶಾಲೆಗೆ ಬಂದ್ರು 50 ವಿದ್ಯಾರ್ಥಿಗಳು !
-ಜಿವೇಂದ್ರ ಶೆಟ್ಟಿ ಗರ್ಡಾಡಿ ಬೆಳ್ತಂಗಡಿ: ಆಂಗ್ಲ ಮಾಧ್ಯಮ ಶಾಲೆಗಳ ಭರಾಟೆಯಿಂದಾಗಿ ಕನ್ನಡ ಶಾಲೆಗಳು ಅವನತಿಯತ್ತ ಸಾಗುತ್ತಿರುವುದು ಹೊಸತೇನಲ್ಲ. ಸಾವಿರಾರು ಸರಕಾರಿ, ಅನುದಾನಿತ ಕನ್ನಡ ಶಾಲೆಗಳಿಗೆ ಬೀಗ ಜಡಿದಿರುವ ಉದಾಹರಣೆ ನಮ್ಮಮುಂದಿದೆ. ಖಾಸಗಿ ಶಾಲೆಗಳು ಆಂಗ್ಲ ಮಾಧ್ಯಮವಾಗಿ ಪರಿವರ್ತನೆಗೊಂಡಿದೆ. ರಾಜ್ಯದಲ್ಲಿ ಸಾವಿರಾರು ಕನ್ನಡ ಶಾಲೆಗಳು ಇತಿಹಾಸದ ಪುಟ ಸೇರಿವೆ. ಇದೇ ರೀತಿ ಇನ್ನು ಕೆಲವೇ ವರ್ಷಗಳಲ್ಲಿ ಮುಚ್ಚಿಹೋಗುವ ಆತಂಕದಲ್ಲಿದ್ದ ಕನ್ನಡ ಮಾಧ್ಯಮ ಅನುದಾನಿತ ಶಾಲೆಯೊಂದರಲ್ಲಿ ಅಚ್ಚರಿಯೆಂಬಂತೆ 300ಕ್ಕೂ ಅಧಿಕ ಮಕ್ಕಳ ಕಲರವ ಕೇಳಿಬರುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ […]