ಡಿಜೆ ಹಳ್ಳಿ ಗಲಭೆ: ಕಾರ್ಪೊರೇಟರ್ ಪತಿ ಕಲೀಂ ಪಾಷ ಸಹಿತ 60 ಮಂದಿಯ ಬಂಧನ
ಬೆಂಗಳೂರು: ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ನಡೆದ ಗಲಭೆ ಸಂಬಂಧಿಸಿ ಕಾರ್ಪೊರೇಟರ್ ಇರ್ಷಾದ್ ಬೇಗಂ ಅವರ ಪತಿ ಕಲೀಂ ಪಾಷ ಸೇರಿದಂತೆ 60 ಮಂದಿಯನ್ನು ಗುರುವಾರ ರಾತ್ರಿ ಬಂಧಿಸಲಾಗಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 206ಕ್ಕೆ ಏರಿಕೆಯಾಗಿದೆ. ಗಲಭೆ ನಡೆಯಲು ಪ್ರಚೋದನೆ ನೀಡಿದ ಆರೋಪ ಕಲೀಂ ಪಾಷ ಮೇಲಿದೆ. ಬಂಧಿತರನ್ನು ವೈದ್ಯಕೀಯ ಹಾಗೂ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅದರ ವರದಿ ಬಂದ ನಂತರ ನ್ಯಾಯಾಲಯದ ಅನುಮತಿ ಪಡೆದು ಕೆಲ ಆರೋಪಿಗಳನ್ನು ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. […]