ಪೈಗಂಬರ್ ಬಗ್ಗೆ ಅವಹೇಳನ: ಕೈ ಶಾಸಕನ ಮನೆಗೆ ಬೆಂಕಿ: ಪೊಲೀಸರ ಗುಂಡಿಗೆ ಮೂವರು ಗಲಭೆಕೋರರು ಬಲಿ
ಬೆಂಗಳೂರು: ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆಂದು ಆರೋಪಿಸಿ 500ಕ್ಕೂ ಅಧಿಕ ದುಷ್ಕರ್ಮಿಗಳ ಗುಪೊಂದು ಪುಲಕೇಶಿನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಕಲ್ಲು ತೂರಾಟ ನಡೆಸಿ ಬೆಂಕಿಹಚ್ಚಿದ ಘಟನೆ ಬೆಂಗಳೂರಿನ ಕಾವಲ್ ಬೈರಸಂದ್ರದಲ್ಲಿ ನಡೆದಿದೆ. ಶಾಸಕನ ತಂಗಿ ಮಗ ಮಹಮ್ಮದ್ ಪೈಗಂಬರ್ ರ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಈ ದಾಂಧಲೆ ನಡೆಸಿದ್ದಾರೆ. ರಸ್ತೆಯಲ್ಲಿರುವ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ […]