ಗಣಿ-ಭೂವಿಜ್ಞಾನ ಇಲಾಖಾಧಿಕಾರಿ ಹತ್ಯೆ ಪ್ರಕರಣ: ಘಟನೆಗೂ ತನಗೂ ಸಂಬಂಧವಿಲ್ಲ ಎಂದು ಶಾಸಕ ಮುನಿರತ್ನ ಸ್ಪಷ್ಟನೆ
ಬೆಂಗಳೂರು: ಶನಿವಾರ ರಾತ್ರಿ ಬೆಂಗಳೂರಿನ ನಿವಾಸದಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣ ರಾಜ್ಯದಲ್ಲಿ ಚರ್ಚೆ ಹುಟ್ಟುಹಾಕಿದೆ. ರಿಯಲ್ ಎಸ್ಟೇಟ್ ಮಾಫಿಯಾ ಸೇರಿದಂತೆ ರಾಜಕಾಲುವೆ ಒತ್ತುವರಿ ವಿಚಾರಗಳು ಇದೀಗ ಮುನ್ನಲೆಗೆ ಬರುತ್ತಿವೆ. ಇದೀಗ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಹೆಸರು ಪ್ರಕರಣಕ್ಕೆ ಥಳಕು ಹಾಕಿಕೊಂಡಿದೆ. ಪ್ರಕರಣದಲ್ಲಿ ಮುನಿರತ್ನ ಅವರ ವಿಚಾರಣೆ ಮಾಡಬೇಕು ಎಂದು ಕೆಪಿಸಿಸಿ ಕಾನೂನು ಘಟಕದ ಮುಖಂಡ ಸೂರ್ಯ ಮುಕುಂದರಾಜ್ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ […]
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಯ ಹತ್ಯೆ ಪ್ರಕರಣ: ಮಾಜಿ ಕಾರು ಚಾಲಕನ ಬಂಧನ
ಬೆಂಗಳೂರು: ರಾಜ್ಯವನ್ನು ಬೆಚ್ಚಿ ಬೀಳಿಸಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಮಾಜಿ ಚಾಲಕನನ್ನು ಸೋಮವಾರ ಬಂಧಿಸಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿ ಪ್ರತಿಮಾ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಎಂದು ಗುರುತಿಸಲಾದ ವ್ಯಕ್ತಿ ಮೊದಲು ಕಾಣೆಯಾಗಿದ್ದ. ಇತ್ತೀಚೆಗೆ ಕಿರಣ್ ನನ್ನು ಇಲಾಖೆಯ ಕೆಲಸದಿಂದ ತೆಗೆದುಹಾಕಲಾಗಿತ್ತು ಮತ್ತು ಅವರ ಬದಲಿಗೆ ಇನ್ನೊಬ್ಬ ಚಾಲಕನನ್ನು ನೇಮಿಸಲಾಗಿತ್ತು. ಘಟನೆಯ ನಂತರ ಕಿರಣ್ ನ ಮೊಬೈಲ್ ಫೋನ್ […]