ಆನ್​ಲೈನ್ ಮೂಲಕ ಕಾಶಿಯಾತ್ರೆಯ 4ನೇ ರೈಲು ಪ್ರಯಾಣಕ್ಕೆ ಟಿಕೆಟ್ ಕಾಯ್ದಿರಿಸಿಕೊಳ್ಳಲು ಮನವಿ : ಜುಲೈ 29ರಿಂದ ಆರಂಭ

ಬೆಂಗಳೂರು:2022-23ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯದಿಂದ ಪುಣ್ಯಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್‌ರಾಜ್ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪ್ಯಾಕೇಜ್‌ ರೂಪಿಸಿ “ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ” ಯೋಜನೆಯನ್ನು ಐಆರ್‌ಸಿಟಿಸಿ ಮತ್ತು ಭಾರತೀಯ ರೈಲ್ವೇ ಇಲಾಖೆಯ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ ಕೈಗೊಳ್ಳಲಾಗಿದೆ. ಕಾಶಿ ದರ್ಶನ ಮಾಡಲಿಚ್ಛಿಸಿರುವ ಯಾತ್ರಾತ್ರಿಗಳು ಆನ್ ಲೈನ್ ಮೂಲಕ ತಮ್ಮ ಟಿಕೆಟ್​ಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕರ್ನಾಟಕ ಭಾರತ್ […]