ಬೆಂಗಳೂರು: ಭಾರೀ ಮಳೆಗೆ ಕುಸಿದ ಕಟ್ಟಡ; ಪ್ರಾಣಾಪಾಯವಿಲ್ಲ

ಕರ್ನಾಟಕ: ಭಾರೀ ಮಳೆಗೆ ಬೆಂಗಳೂರಿನ ವಿದ್ಯಾರಾಯನಪುರದಲ್ಲಿ ಹಳೆ ಕಟ್ಟಡ ಒಂದು ಕುಸಿದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ನಗರದ ಹಲವೆಡೆ ನೀರು ತುಂಬಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಹಲವೆಡೆ ಮರಗಳು ಉರುಳಿದ್ದು, ಕೆ.ಆರ್ ಸರ್ಕಲ್ ಪ್ರದೇಶದಲ್ಲಿ ನೀರು ತುಂಬಿ ಜನರು ಅಂಡರ್ ಪಾಸ್ ಬಳಿ ಪರದಾಡುವಂತಾಗಿದ್ದು, ಬಳಿಕ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು. ಈ ಬಾರಿ ಮುಂಗಾರು ಮಳೆಯು ಜೂನ್ 4 ರಂದು ಕೇರಳ ಪ್ರವೇಶಲಿದೆ ಎಂದು ಭಾರತೀಯ […]

ಬೆಂಗಳೂರು-ದ.ಕ ಜಿಲ್ಲೆಗಳಲ್ಲಿ ಸಿಎನ್‌ಜಿ/ಪಿಎನ್‌ಜಿ ಬೆಲೆ ಪ್ರತಿ ಎಸ್.ಸಿಎಂಗೆ 7 ರೂ ಕಡಿತ: ಗೈಲ್ ನಿಂದ ಘೋಷಣೆ

ಬೆಂಗಳೂರು: ಸರ್ಕಾರವು ನೈಸರ್ಗಿಕ ಅನಿಲದ ಬೆಲೆ ಸೂತ್ರವನ್ನು ಬದಲಾಯಿಸಿದ ಕೆಲವೇ ದಿನಗಳಲ್ಲಿ, GAIL (ಗೈಲ್) ಗ್ಯಾಸ್ ಲಿಮಿಟೆಡ್ ಭಾನುವಾರ ಸಿ.ಎನ್.ಜಿ ಮತ್ತು ಪಿ.ಎನ್.ಜಿ ಬೆಲೆಗಳಲ್ಲಿ ಪ್ರತಿ ಯೂನಿಟ್‌ಗೆ ರೂ 7 ವರೆಗೆ ಕಡಿತವನ್ನು ಘೋಷಿಸಿದೆ. ಸಾರಿಗೆಗಾಗಿ ಬಳಸುವ ಸಂಕುಚಿತ ನೈಸರ್ಗಿಕ ಅನಿಲ (ಸಿ.ಎನ್.ಜಿ) ಕರ್ನಾಟಕದಲ್ಲಿ ಪ್ರತಿ ಕೆಜಿಗೆ 7 ರೂಪಾಯಿಗಳಷ್ಟು ಅಗ್ಗವಾಗಿದೆ ಎಂದು ಗೈಲ್ (ಇಂಡಿಯಾ) ಲಿಮಿಟೆಡ್‌ನ ಸಿಟಿ ಗ್ಯಾಸ್ ಆರ್ಮ್ ಗೈಲ್ ಗ್ಯಾಸ್ ಲಿಮಿಟೆಡ್ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ. ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ […]

ಪ್ರಧಾನಿ ಮೋದಿ ಭೇಟಿ ಮಾಡಿದ ಕನ್ನಡ ಚಿತ್ರರಂಗದ ಕಲಾವಿದರು

ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಯಶ್, ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು, ಬ್ಲಾಗರ್ ಅಯ್ಯೋ ಶ್ರದ್ಧಾ ಮತ್ತು ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಇಂಡಿಯಾ ಪವಿಲಿಯನ್ ನಲ್ಲಿ ಏರೋ ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದು ಈ ಸಂದರ್ಭ ಭೇಟಿ ನಡೆದಿದೆ. ಪ್ರಧಾನಿ ಮೋದಿಯವರನ್ನು ಭೇಟಿಯಾದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಯಶ್, ಮೋದಿಯವರ ಬಳಿ ಚಿತ್ರೋದ್ಯಮದ ಬಗ್ಗೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ. […]

ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ ಹೊಸ ಮನೆ ‘ವಲ್ಮೀಕ’ ದ ಅದ್ದೂರಿ ಗೃಹಪ್ರವೇಶ

ಬೆಂಗಳೂರು: ಕನ್ನಡಿಗರ ಹೃದಯದಲ್ಲಿ ಚಿರಸ್ಥಾಯಿಯಾಗಿ ನೆಲೆನಿಂತಿರುವ ಸಹೃದಯ ವ್ಯಕ್ತಿತ್ವದ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಹೊಸ ಮನೆಯ ಗೃಹಪ್ರವೇಶ ಭಾನುವಾರದಂದು ಬಹಳ ಅದ್ದೂರಿಯಾಗಿ ನೆರವೇರಿದೆ. ಮನೆಯ ದ್ವಾರದಲ್ಲೇ ಸಿಂಹದ ಕಂಚಿನ ಪ್ರತಿಮೆ ವಿಷ್ಣುರವರಿಗೆ ಸಮರ್ಪಿತವಾಗಿದ್ದು ಎಲ್ಲರನ್ನೂ ಸ್ವಾಗತಿಸುತ್ತಿದೆ. ಮುಂಭಾಗದಲ್ಲಿ ಕೃಷ್ಣನ ಬೆಳ್ಳಿಯಿಂದ ಅಲಂಕೃತ ಮೂರ್ತಿಯನ್ನಿಡಲಾಗಿದೆ. ಜಯನಗರದ 4ನೇ ಟಿ ಬ್ಲಾಕ್ ನಲ್ಲಿ ನಿರ್ಮಾಣವಾಗಿರುವ ಈ ಮನೆಗೆ ‘ವಲ್ಮೀಕ’ ಎಂದು ಹೆಸರಿಡಲಾಗಿದೆ. ನೂತನ ಗೃಹದ ಗೃಹಪ್ರವೇಶ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡು ಶುಭ ಹಾರೈಸಿದರು. ಹಾಗೆಯೇ […]

ಬೆಂಗಳೂರಿನ ಬಾಲಕಿ ಮಂಗಳೂರಿನಲ್ಲಿ ನಾಪತ್ತೆ

ಮಂಗಳೂರು: ಸೋಮವಾರ ಮಂಗಳೂರಿಗೆ ಬಂದಿಳಿದಿದ್ದ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಭಾರ್ಗವಿ (14) ಎಂಬ ಬಾಲಕಿ ನಾಪತ್ತೆಯಾಗಿದ್ದಾಳೆ. ಭಾರ್ಗವಿ ಸೋಮವಾರ ಮುಂಜಾನೆ 3 ಗಂಟೆಗೆ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದ ನಂತರದಿಂದ ನಾಪತ್ತೆಯಾಗಿದ್ದಾಳೆ. ಬಾಲಕಿಯ ಪತ್ತೆಗಾಗಿ ಪೋಷಕರು ಮನವಿ ಮಾಡಿದ್ದಾರೆ. ಬಾಲಕಿಯ ಬಗ್ಗೆ ಮಾಹಿತಿ ದೊರೆತಲ್ಲಿ ಶಶಿ: 9972031021 ಅಥವಾ ಮಹದಿ: 9916595109 ಈ ಸಂಖ್ಯೆಗೆ ಕರೆಮಾಡುವಂತೆ ಮನವಿ ಮಾಡಿದ್ದಾರೆ.