ಪರಿಶಿಷ್ಟ ಪಂಗಡಗಳ ಪಟ್ಟಿಗೆ ಬೆಟ್ಟ ಕುರುಬ ಸಮುದಾಯ: ಲೋಕಸಭೆಯಲ್ಲಿ ಮಸೂದೆ ಅಂಗೀಕಾರ
ನವದೆಹಲಿ: ‘ಬೆಟ್ಟ-ಕುರುಬ’ ಸಮುದಾಯವನ್ನು ‘ಕಾಡು ಕುರುಬ’ ಸಮುದಾಯದ ಜೊತೆಗೆ ಕರ್ನಾಟಕದ ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಮಸೂದೆಯನ್ನು ಲೋಕಸಭೆ ಸೋಮವಾರ ಅಂಗೀಕರಿಸಿದೆ. ಕರ್ನಾಟಕದ ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ‘ಬೆಟ್ಟ-ಕುರುಬ’ ಸಮುದಾಯದ ಜನರು ವಾಸಿಸುತ್ತಿದ್ದಾರೆ. ಇವರು ತಮ್ಮನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರಿಸಬೇಕು ಎಂದು ಸರಕಾರವನ್ನು ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿನಂತಿಯ ಮೇರೆಗೆ ಸಂಸತ್ತಿನ ಕೆಳಮನೆಯ 20 ಕ್ಕೂ ಹೆಚ್ಚು ಸದಸ್ಯರು ಚರ್ಚೆಯಲ್ಲಿ ಭಾಗವಹಿಸಿದ ನಂತರ ಸಂವಿಧಾನ (ಪರಿಶಿಷ್ಟ ಬುಡಕಟ್ಟುಗಳು) ಆದೇಶ (ನಾಲ್ಕನೇ ತಿದ್ದುಪಡಿ) […]