ಆನ್‌ಲೈನ್ ಗೇಮ್ ಗಳನ್ನು ನಿಷೇಧಿಸುವ ಕಾನೂನು ಜಾರಿಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಆನ್‌ಲೈನ್ ಗೇಮಿಂಗ್ ಜನರ, ಅದರಲ್ಲೂ ವಿಶೇಷವಾಗಿ ಯುವಜನರ ಜೀವನವನ್ನು ಹಾಳುಮಾಡುತ್ತಿದೆ ಎಂದು ಆರೋಪಿಸಿ ಹಲವಾರು ರಾಜ್ಯಗಳು ಆನ್‌ಲೈನ್ ಗೇಮಿಂಗ್ ಅನ್ನು ನಿಷೇಧಿಸಲು ಕಾನೂನನ್ನು ಜಾರಿಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದೆ. ಗುಜರಾತ್‌ನ ಏಕತಾನಗರದಲ್ಲಿ ನಡೆದ ಎರಡು ದಿನಗಳ ಕಾನೂನು ಸಚಿವರು ಮತ್ತು ಎಲ್ಲಾ ರಾಜ್ಯಗಳ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಈ ಬೇಡಿಕೆಯನ್ನು ಸಲ್ಲಿಸಲಾಗಿದೆ. ಹಲವಾರು ಯುವಕರು ಬೆಟ್ಟಿಂಗ್ ಮತ್ತು ಪಂತದ ಆನ್‌ಲೈನ್ ಗೇಮಿಂಗ್ ನಲ್ಲಿ ಅಪಾರ ಪ್ರಮಾಣದ ಹಣ ಕಳೆದುಕೊಳ್ಳುತ್ತಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇಂತಹ ವ್ಯಸನಾಧಾರಿತ ಆಟಗಳನ್ನು ನಿಷೇಧಿಸಬೇಕೆಂದು ಕರ್ನಾಟಕ, […]
ಕ್ರಿಕೆಟ್ ಬೆಟ್ಟಿಂಗ್ ಮೂವರ ಬಂಧನ
ಮಂಗಳೂರು: ಮಂಗಳೂರಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಮೂವರನ್ನು ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸಂತೋಷ್, ಜೀವನ್ ಕುಮಾರ್, ನಿಶಾಂತ್, ಬಂಧಿತರು. ಬಂಧಿತರಿಂದ ಒಟ್ಟು 1. 40 ಸಾವಿರ ರೂ. ಹಣ, 6 ಮೊಬೈಲ್, ಒಂದು ಕಾರು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ನಿರತ ಓರ್ವನ ಬಂಧನ
ಮಂಗಳೂರು: ವಿಶ್ವಕಪ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಓರ್ವನನ್ನು ಮಂಗಳೂರು ಅಪರಾಧ ಪತ್ತೆ ದಳ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮಂಗಳೂರು ನಿವಾಸಿ ಕೀರ್ತಿರಾಜ್ ಬಂಧಿತ ಆರೋಪಿಯಾಗಿದ್ದು, ಈತನಿಂದ 7 ಲ.ರೂ.ನಗದು, 5 ಮೊಬೈಲ್ ಹಾಗೂ ಲ್ಯಾಪ್‌ಟಾಪ್ ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿರುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ವಿಶ್ವಕಪ್ ಪ್ರಾರಂಭದ ಬಳಿಕ ಬೆಟ್ಟಿಂಗ್ ದಂಧೆಗೆ ಸಂಬಂಧಿಸಿದಂತೆ ದಾಳಿ ನಡೆಸಿರುವ 2ನೇ ಪ್ರಕರಣ ಇದಾಗಿದೆ. ಕಳೆದ ಐಪಿಎಲ್ ಪಂದ್ಯದ […]