ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಬಿ.ಜಿ. ಮೋಹನ್ ದಾಸ್ ವಿಧಿವಶ
ಉಡುಪಿ: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಬಿ.ಜಿ. ಮೋಹನ್ ದಾಸ್ (70) ಅವರು ಅನಾರೋಗ್ಯದಿಂದ ಇಂದು ವಿಧಿವಶರಾದರು. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಅವರು ಇಂದು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಪತ್ನಿ ಯಶೋದಾ, ಪುತ್ರ ಅಖಿಲ್ ಹಾಗೂ ಪುತ್ರಿ ಯಶಸ್ವಿ ಹಾಗೂ ಅಪಾರ ಬಂಧು, ಮಿತ್ರರನ್ನು ಅಗಲಿದ್ದಾರೆ. ಮಣಿಪಾಲದಿಂದ ಫಾರ್ಮಸಿ ವಿಭಾಗದಲ್ಲಿ ಸ್ನಾತಕೋತರ ಪದವಿ ಪಡೆದಿರುವ ಬೀಜಿಯವರು ಗಲ್ಫ್‌ನಾಡಿಗೆ ವಲಸೆ ಬರುವ ಮುನ್ನ ಮಣಿಪಾಲದಲ್ಲಿ ಫಾರ್ಮಸಿ ವಿಭಾಗದ ಸಹಾಯಕ ಪ್ರೊಪೆಸರ್ ಆಗಿಯೂ ಸೇವೆ ಸಲ್ಲಿಸಿದ್ದು, 1985ರಲ್ಲಿ […]