ಮಹನೀಯರ ತತ್ವಾದರ್ಶಗಳನ್ನು ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು: ಅಪರ ಜಿಲ್ಲಾಧಿಕಾರಿ
ಉಡುಪಿ: ಸಾಧಕರು, ದಾರ್ಶನಿಕರ ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ತಿಳಿಸಿದರು. ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಭಗೀರಥ ಮಹರ್ಷಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಹೇಮರೆಡ್ಡಿ ಮಲ್ಲಮ್ಮ ಅಚಲವಾದ ವಿಶ್ವಾಸ, ತಾಳ್ಮೆಯಿಂದ ತಮ್ಮ ಕುಟುಂಬದವರ ಮನಸ್ಸನ್ನು ಗೆಲ್ಲುವುದರ ಜೊತೆಗೆ ಅವರ ಮನ ಪರಿವರ್ತನೆ ಮಾಡುವುದರೊಂದಿಗೆ ಸಮಾಜದಲ್ಲಿ […]