ಭಂಡಾರ್ಕಾರ್ಸ್ ಕಾಲೇಜು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ವಿಶ್ವವಿದ್ಯಾಲಯ ಮಟ್ಟದ ದೇಶಭಕ್ತಿ ಗೀತೆ, ಓಟದ ಸ್ಪರ್ಧೆ

ಕುಂದಾಪುರ: ನಾವು ದೇಶದ ಆಸ್ತಿಯಾಗಬೇಕು. ಆಜಾದಿ ಕಾ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಯುವಜನತೆ ದೇಶದ ಅಖಂಡತೆ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾಗಬೇಕು ಎಂದು ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್ ವಿ.ನಾಯಕ್  ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಜುಲೈ 26ರಂದು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ನಡೆದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ವಿಶ್ವವಿದ್ಯಾಲಯ ಮಟ್ಟದ ದೇಶಭಕ್ತಿ ಗೀತೆ ಗಾಯನ ಮತ್ತು ಸ್ವಾತಂತ್ರ್ಯ ಓಟದ ಸ್ಪರ್ಧೆಯನ್ನು […]

ಕುಂದಾಪುರ: ಭಂಡಾರ್ಕರ್ಸ್ ಕಾಲೇಜಿನಲ್ಲಿ ಸ್ವಯಂ ಪ್ರತಿಫಲನ ಕಾರ್ಯಗಾರ

ಕುಂದಾಪುರ: ನಮ್ಮೊಳಗಿನ ಶಕ್ತಿಯನ್ನು ಅರಿಯುವ ತನಕ ಏನನ್ನೂ ಸಾಧಿಸಲು ಸಾಧ್ಯವಾಗುವುದಿಲ್ಲ ಹಾಗಾಗಿ ನಾವೇನು, ನಮ್ಮ ಶಕ್ತಿ ಏನೆಂದು ಅರಿತರೆ ಅಂದುಕೊಂಡ ಗುರಿಯನ್ನು ತಲುಪಬಹುದು ಎಂದು ಮಂಗಳೂರಿನ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಇದರ ಕಾರ್ಯನಿರ್ವಾಹಕ ನಿರ್ದೇಶಕಿ ಶ್ರೀಮತಿ ಸಚಿತ ನಂದಗೋಪಾಲ್ ಹೇಳಿದರು. ಅವರು ಜುಲೈ15 ರಂದು ಭಂಡರ್ಕಾರ್ಸ್ ಕಾಲೇಜಿನಲ್ಲಿ ಐಚ್ಛಿಕ ಭಾಷೆ ಇಂಗ್ಲಿಷ್-ಪತ್ರಿಕೋದ್ಯಮ ಹಾಗೂ ಮನಶಾಸ್ತ್ರ ವಿಭಾಗಗಳು ಸೇರಿ ಆಯೋಜಿಸಿದ್ದ ‘ಸ್ವಯಂ ಪ್ರತಿಫಲನ’ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು. ಜೀವನದಲ್ಲಿ ಅನೇಕ ಬಾರಿ ಸೋಲು ಗೆಲುವು ಎಲ್ಲವೂ […]

ಯುವಕರ ಉದ್ಯೋಗದ ಕನಸಿಗೆ ಸಹಕಾರ ನೀಡುವ ಸ್ಕಿಲ್ ಕನೆಕ್ಟ್ ಪೋರ್ಟಲ್ ಜುಲೈ 15 ರಂದು ಲೋಕಾರ್ಪಣೆ: ಡಾ.ಅಶ್ವಥ್ ನಾರಾಯಣ್

ಉಡುಪಿ: ರಾಜ್ಯದ ಯುವಜನತೆಗೆ ಅವರ ಕನಸಿನ ಉದ್ಯೋಗ ಪಡೆಯಲು ಸಹಕಾರಿಯಾಗುವಂತೆ ಎಲ್ಲಾ ಅಗತ್ಯ ಮಾಹಿತಿ ಹಾಗೂ ನೆರವು ನೀಡುವ ಸ್ಕಿಲ್ ಕನೆಕ್ಟ್ ಪರಿಷ್ಕೃತ ಪೋರ್ಟಲ್ ಅನ್ನು ಜುಲೈ 15 ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ರಾಜ್ಯದ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಅಶ್ವಥ್ ನಾರಾಯಣ ಹೇಳಿದರು. ಅವರು ಇಂದು ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಕೌಶಾಲ್ಯಾಭಿವೃದ್ಧಿ ಉದ್ಯಮ […]