ಡಿ.5 ರಂದು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

​ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಸಮಾರಂಭವು ಡಿಸೆಂಬರ್ 5 ರಂದು ಬೆಳಿಗ್ಗೆ 10 ಗಂಟೆಗೆ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜು ಟ್ರಸ್ಟ್ ನ ಅಧ್ಯಕ್ಷ ಶಾಂತಾರಾಮ್ ಭಂಡಾರ್ಕರ್, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.ಸಿಂಗಾಪುರದ ಜಾನಕಿ ಶ್ರೀಕಾಂತ್ ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.