ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲುವುದು ಪಕ್ಕಾ: ಡಿಕೆ ಶಿವಕುಮಾರ್
ಬಳ್ಳಾರಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಡಿಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ. ಯಾರ ಜೊತೆಗೂ ಮೈತ್ರಿ ಇಲ್ಲದೇ ಈ ಸಂಖ್ಯಾಬಲ ಸಾಧಿಸುತ್ತೇವೆ ಎಂದು ಅವರು ಹೇಳಿದ್ದಾರೆ. ರಾಜ್ಯ ವಿಧಾನಸಭೆಯು 224 ಸ್ಥಾನಗಳನ್ನು ಹೊಂದಿದ್ದು, ಬಹುಮತಕ್ಕೆ 150 ಸ್ಥಾನಗಳು ಬೇಕಾಗಿರುತ್ತದೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಭಾರತ್ ಜೋಡೋ ಯಾತ್ರೆಗೆ ಕರ್ನಾಟಕದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ 150 ವಿಧಾನಸಭಾ […]
ಭಾರತ್ ಜೋಡೋ ಯಾತ್ರೆ: ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ?
ಬೆಂಗಳೂರು: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 30 ರಂದು ಕರ್ನಾಟಕಕ್ಕೆ ಪ್ರವೇಶಿಸಲಿದ್ದು, ಪಕ್ಷದ ರಾಜ್ಯ ಮುಖ್ಯಸ್ಥ ಡಿ ಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಭಿನ್ನಾಭಿಪ್ರಾಯವು ರಾಜ್ಯ ಘಟಕದಲ್ಲಿನ ದೋಷಗಳನ್ನು ಮತ್ತೆ ಬಹಿರಂಗಪಡಿಸಿದೆ ಎಂದು ಮಾಧ್ಯಮ ವರದಿಗಳು ಹೇಳುತ್ತಿವೆ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕದ ಉದ್ದಗಲಕ್ಕೂ 22 ದಿನಗಳ ಕಾಲ ಸಂಚರಿಸಲಿದೆ. ಆದರೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಬಣಗಳು ಒಂದಾಗಲು ಹೆಣಗಾಡುತ್ತಿರುವಂತೆ ತೋರುತ್ತಿದೆ. ರಾಜ್ಯದಲ್ಲಿ ಯಾತ್ರೆಯನ್ನು […]
ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯಲ್ಲ; ದೇಶ ವಿಭಜನೆಯ ಪ್ರಾಯಶ್ಚಿತ್ತ ಯಾತ್ರೆ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ತನ್ನದೇ ಸಾಧನೆ ಎಂಬಂತೆ ಬಿಂಬಿಸುವ ಪ್ರಯತ್ನದ ಮೂಲಕ ಸ್ವಾತಂತ್ರ್ಯ ಯೋಧರನ್ನು ಅವಮಾನಿಸುವುದು ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಅಪಪ್ರಚಾರಗೈಯುವುದು ಕಾಂಗ್ರೆಸ್ ನ ‘ಭಾರತ್ ಜೋಡೋ’ ಯಾತ್ರೆಯ ಮೂಲ ಉದ್ದೇಶವಾಗಿದೆ. ಕಾಂಗ್ರೆಸ್ ನ ಅನೇಕ ಹಿರಿಯ ಮುಖಂಡರು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ವೈಫಲ್ಯದ ಗುಣಗಾನಗೈದು ಕಾಂಗ್ರೆಸ್ಸನ್ನು ಅವ್ಯಾಹತವಾಗಿ ತೊರೆಯುತ್ತಿರುವ ಸಂದಿಗ್ಧ ಸನ್ನಿವೇಶದಲ್ಲಿ ಗೊಂದಲದ ಗೂಡಾಗಿರುವ ಕಾಂಗ್ರೆಸ್ ಇದೀಗ […]
ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಗೆ ಸಜ್ಜಾದ ಕಾರವಾನ್ ಮಾದರಿ ಕಂಟೇನರ್ ಗಳು
ನವದೆಹಲಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ್ ಜೋಡೋ ಯಾತ್ರೆಯನ್ನು ಆರಂಭಿಸಿದ್ದು, ಇದಕ್ಕಾಗಿ ಕಂಟೇನರ್ ಗಳನ್ನು ಬೆಡ್ ರೂಂ ಮಾದರಿ ವಿನ್ಯಾಸಗೊಳಿಸಲಾಗಿದೆ. ಈ ಎಲ್ಲಾ ಕಂಟೆನರ್ ಗಳನ್ನು ಹಗಲು ಹೊತ್ತಿನಲ್ಲಿ ಒಂದೆಡೆ ನಿಲ್ಲಿಸಲಾಗುತ್ತದೆ. ಈ ಹೊತ್ತಿನಲ್ಲಿ ಇದೊಂದು ಸಣ್ಣ ಹಳ್ಳಿಯಂತೆ ಕಾಣುತ್ತದೆ. ಸುಮಾರು 60 ಟ್ರಕ್ ಗೆ ಆರೋಹಿಸಲಾದ ಕಂಟೈನರ್ ವ್ಯಾನ್‌ಗಳು ಹವಾನಿಯಂತ್ರಿತ ಮಲಗುವ ಕೋಣೆಗಳಾಗಿ ಮಾರ್ಪಟ್ಟಿವೆ. ಮುಂದಿನ ಐದು ತಿಂಗಳವರೆಗಿನ ರಾಹುಲ್ ಗಾಂಧಿ ಯಾತ್ರೆಯಲ್ಲಿ ಇವು ಭಾರತದಾದ್ಯಂತ ಚಲಿಸಲಿವೆ. ಕಂಟೈನರ್‌ಗಳನ್ನು ಅದರಲ್ಲಿರುವ […]
ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ಕುರಿತು ಸಭೆ: ವೈಯಕ್ತಿಕ ಭೇಟಿಗಾಗಿ ವಿದೇಶಕ್ಕೆ ತೆರಳಿದ ರಾಹುಲ್ ಗಾಂಧಿ
ನವದೆಹಲಿ: ಮಂಗಳವಾರದಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಸಣ್ಣ ವೈಯಕ್ತಿಕ ಭೇಟಿಗೆ’ ವಿದೇಶಕ್ಕೆ ತೆರಳಿದ್ದು, ರಾಷ್ಟ್ರಪತಿ ಚುನಾವಣೆ ಮತ್ತು ಜುಲೈ 18 ರಂದು ನಡೆಯಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಮುನ್ನ ಭಾನುವಾರದ ವೇಳೆಗೆ ಹಿಂತಿರುಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಪಕ್ಷವು ಅವರ ಭೇಟಿಯ ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ ಮತ್ತು ಅದನ್ನು ವೈಯಕ್ತಿಕ ಭೇಟಿ ಎಂದಷ್ಟೆ ಹೇಳಿದೆ. ಪದೇ ಪದೇ ವಿದೇಶಕ್ಕೆ ಭೇಟಿ ನೀಡುತ್ತಿರುವುದಕ್ಕಾಗಿ ಬಿಜೆಪಿಯಿಂದ ಆಗಾಗ್ಗೆ ಟೀಕೆಗೆ ಒಳಗಾಗಿರುವ ರಾಹುಲ್, ಗುರುವಾರ ನಡೆಯಲಿರುವ ‘ಭಾರತ್ […]