ಜೋಡಿಕೊಲೆ ಆರೋಪಿಗಳನ್ನು ಗಡಿಪಾರು ಮಾಡಿ: ಶವವಿಟ್ಟು ಪ್ರತಿಭಟನೆ
ಕುಂದಾಪುರ: ಭರತ್ ಹಾಗೂ ಯತೀಶ್ ಮೇಲೆ ತಲವಾರಿನಿಂದ ದಾಳಿ ನಡೆಸಿ ಕೊಲೆಗೈದಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರನ್ನು ಗಡಿಪಾರು ಮಾಡಬೇಕೆಂದು ಕೋಟ ರಾಷ್ಟ್ರೀಯ ಹೆದ್ದಾರಿ ಸಮೀಪ ಇಬ್ಬರ ಶವವಿಟ್ಟು ಭಾನುವಾರ ಸಂಜೆ ಪ್ರತಿಭಟನೆ ನಡೆಸಲಾಯಿತು. ಶನಿವಾರ ತಡರಾತ್ರಿ ತಲವಾರು ದಾಳಿಯಿಂದಾಗಿ ಸಾವನ್ನಪ್ಪಿದ ಯತೀಶ್ ಹಾಗೂ ಭರತ್ ಮೃತದೇಹಗಳ ಮರಣೋತ್ತರ ಪರೀಕ್ಷೆ ಮಣಿಪಾಲ ಆಸ್ಪತ್ರೆಯಲ್ಲಿ ನಡೆಯಿತು. ಭಾನುವಾರ ಸಂಜೆ ಆಸ್ಪತ್ರೆಯಿಂದ ನೇರವಾಗಿ ಕೋಟ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಇಬ್ಬರ ಶವವಿಟ್ಟು ವಿವಿಧ ಸಂಘ ಸಂಸ್ಥೆಗಳು, ಸ್ನೇಹಿತರು, ಕುಟುಂಬಸ್ಥರು ಪ್ರತಿಭಟನೆ […]