ಭೋಪಾಲ್‌ನಲ್ಲಿ ಸರ್ಕಾರಿ ಕಚೇರಿಗಳಿರುವ ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ
ಭೋಪಾಲ್ (ಮಧ್ಯಪ್ರದೇಶ): ಸರ್ಕಾರಿ ಕಚೇರಿಗಳನ್ನು ಹೊಂದಿರುವ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಇಂದು ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆದಿದೆ.ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಸರ್ಕಾರಿ ಕಚೇರಿಗಳನ್ನು ಹೊಂದಿರುವ ಸಾತ್ಪುರ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವು ದಾಖಲೆಗಳು ಹಾಗೂ ಕಂಪ್ಯೂಟರ್‌ಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ. ಬೆಂಕಿಯು ಕ್ಷಣಾರ್ಧದಲ್ಲಿ ಬಹುದೊಡ್ಡ ರೂಪ ಪಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಆರು ವಾಹನಗಳ ಸಮೇತ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇಲ್ಲಿನ ಆಡಳಿತ ಕಟ್ಟಡವಾದ ಸಾತ್ಪುರ ಭವನದ ಬುಡಕಟ್ಟು ಕಲ್ಯಾಣ […]