ಭೋಪಾಲ್-ದೆಹಲಿ ವಂದೇ ಭಾರತ್ ರೈಲಿನ ಬ್ಯಾಟರಿ ಬಾಕ್ಸ್ ನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ

ನವದೆಹಲಿ: ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಒಂದು ಕೋಚ್‌ನಲ್ಲಿನ ಬ್ಯಾಟರಿ ಬಾಕ್ಸ್‌ ನಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಆದರೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ. ಮಧ್ಯಪ್ರದೇಶದ ಕುರ್ವೈ ಕೆಥೋರಾ ನಿಲ್ದಾಣದಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ರೈಲು ಬೆಳಿಗ್ಗೆ 5.40 ರ ಸುಮಾರಿಗೆ ಭೋಪಾಲ್‌ನಿಂದ ಹೊರಟು ದೆಹಲಿಯ ಹಜರತ್ ನಿಜಾಮುದ್ದೀನ್ ನಿಲ್ದಾಣವನ್ನು ಮಧ್ಯಾಹ್ನ 1.10 ರ ಸುಮಾರಿಗೆ ತಲುಪುತ್ತದೆ. ಸ್ಥಳದ ದೃಶ್ಯಗಳು ಚಕ್ರಗಳ ಬಳಿಯಿಂದ ಹೊಗೆ ಹೊರಹೊಮ್ಮುವುದನ್ನು […]