ವಿಶ್ವ ಬೈಸಿಕಲ್ ದಿನಾಚರಣೆ : ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಮಲ್ಪೆ ಬೀಚ್‌ವರೆಗೆ ಬೈಸಿಕಲ್ ಜಾಥಾ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ನೆಹರು ಯುವ ಕೇಂದ್ರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ವಿಶ್ವ ಬೈಸಿಕಲ್ ದಿನಾಚರಣೆಯ ಪ್ರಯುಕ್ತ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಮಲ್ಪೆ ಬೀಚ್‌ವರೆಗೆ ನಡೆದ ಬೈಸಿಕಲ್ ಜಾಥಾಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಿದರು. ಜಾಥಾದಲ್ಲಿ ಡಿ.ಎಫ್.ಓ ಆಶಿಶ್ ರೆಡ್ಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸೈಕ್ಲಿಸ್ಟ್ ಗಳು ಹಾಗೂ ನಾಗರಿಕರು ಭಾಗವಹಿಸಿದ್ದರು. ಜಿಲ್ಲಾ ಯುವ ಸಮನ್ವಯಾಧಿಕಾರಿ […]