ವಾರಾಹಿ ಎಡದಂಡೆ ಯೋಜನೆಯಿಂದ ಜನರಿಗಾಗುತ್ತಿರುವ ತೊಂದರೆ ತಕ್ಷಣ ಬಗೆಹರಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಹಾರ್ದಳ್ಳಿ-ಮಂಡಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಹಾದು ಹೋಗಿರುವ ವಾರಾಹಿ ಎಡದಂಡೆ ಕಾಮಗಾರಿಯಿಂದ ಸ್ಥಳೀಯರಿಗೆ ಸಂಪರ್ಕ ರಸ್ತೆ ಸಮಸ್ಯೆ ಸೇರಿದಂತೆ ಮತ್ತಿತರ ಸಮಸ್ಯೆಗಳ ಬಗ್ಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಶನಿವಾರ ಬಿದ್ಕಲ್‌ಕಟ್ಟೆಯ ಕೆ.ಪಿ.ಎಸ್. ಶಾಲೆಯಲ್ಲಿ ನಡೆದ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ವ್ಯಾಪ್ತಿಯ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಾರಾಹಿ ಎಡದಂಡೆ ಕಾಮಗಾರಿಯ ಕಾರಣ ಗ್ರಾಮದಲ್ಲಿ ಹಲವೆಡೆ ಸಂಪರ್ಕ ರಸ್ತೆಗಳ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ವಾರಾಹಿ […]